Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಈ ಎರಡು ರಸ್ತೆಗಳಲ್ಲಿ ಏಕಮುಖ ಸಂಚಾರ: ಸಹಕರಿಸಲು ಮನವಿ

 

ಬೆಳಗಾವಿ: ಬೆಳಗಾವಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಪ್ರಮುಖ ಎರಡು ರಸ್ತೆಗಳಲ್ಲಿ ಏಕಮುಖ ಸಂಚಾರ ನಿಯಮ ಜಾರಿ ಮಾಡಲಾಗಿದೆ.

ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಫೋರ್ಟ್ ರಸ್ತೆಯಲ್ಲಿ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯ ಅಂಗಡಿ ಮುಗ್ಗಟ್ಟುಗಳಿದ್ದು, ಈ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟವಿದ್ದುದರಿಂದ ಸುಗಮ ಸಂಚಾರದಲ್ಲಿ ಅತೀವ ತೊಂದರೆ ಉಂಟಾಗುತ್ತಿರುತ್ತದೆ. ಈ ಸಂಬಂಧ ಸ್ಥಳೀಯ ವರ್ತಕರ ಸಭೆಯನ್ನು ಏರ್ಪಡಿಸಿ ಅವರ ಕುಂದು ಕೊರತೆಗಳನ್ನು ಆಲಿಸಿ ನಂತರ ಏಕಮುಖ ಸಂಚಾರ ಪ್ರಸ್ತಾವನೆ ಮಾಡಿದ ರಸ್ತೆಯಲ್ಲಿ ಅವರೊಂದಿಗೆ ಸಂಚರಿಸಿ ಅಲ್ಲಿ ಉಂಟಾಗುತ್ತಿದ ಸಂಚಾರ ವ್ಯವಸ್ಥೆಯ ತೊಂದರೆಗಳನ್ನು ಗಮನಿಸಿ ಏಕಮುಖ ಸಂಚಾರದ ಬಗ್ಗೆ ಸ್ಥಳೀಯ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಲು ಶೇಕಡಾ 80 ರಷ್ಟು ಜನರು ಏಕಮುಖ ಸಂಚಾರದ ಪರವಾಗಿ ಅಭಿಪ್ರಾಯ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ದೇಶಪಾಂಡೆ ಪೆಟ್ರೋಲ್ ಪಂಪ್ ದಿಂದ ಮುಜಾವರ ಬೂಟ ಕಡೆಗೆ ಪಶ್ಚಿಮ ದಿಂದ ಪೂರ್ವಕ್ಕೆ ಸಂಚರಿಸುವುದು‌

ಜಿಜಾಮಾತಾ ಸರ್ಕಲ್ ದಿಂದ ದೇಶಪಾಂಡೆ ಪೆಟ್ರೋಲ್ ಪಂಪ್ ಕಡೆಗೆ ಪೂರ್ವದಿಂದ ಪಶ್ಚಿಮಕ್ಕೆ ಸಂಚರಿಸುವುದು

ಈ ಮೇಲಿನಂತೆ ಎರಡೂ ರಸ್ತೆಗಳನ್ನು “ಏಕಮುಖ ಸಂಚಾರ” (One Way Traffic) ವ್ಯವಸ್ಥೆಯ ಆಜ್ಞೆಯನ್ನು ಎಪ್ರಿಲ್ 14 ರಂದು ಹೊರಡಿಸಲಾಗಿದೆ. ಇದೇ ರೀತಿ ಇನ್ನು ಮುಂದೆಯೂ ಸಹ ಬೆಳಗಾವಿ ನಗರದಲ್ಲಿ ಸಂಚಾರ ವ್ಯವಸ್ಥೆಗೆ ಹೆಚ್ಚು ತೊಂದರೆ ಉಂಟಾಗುವ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಜನರೊಂದಿಗೆ ಚರ್ಚಿಸಿ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾಡಲಾಗುವುದು.

ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬೆಳಗಾವಿ ನಗರ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವು