Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಗದೊಮ್ಮೆ ಪಕ್ಷಾಂತರ : ಸಿಎಂ ಭೇಟಿಯಾಗಿ ಆಶೀರ್ವಾದ ಪಡೆದ ಸೈನಿಕ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ಯೋಗೇಶ್ವರ ಅವರು ಈ ಹಿಂದೆ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಜೆಡಿಎಸ್ ನಲ್ಲಿ ರಾಜಕೀಯ ಜೀವನ ನಡೆಸಿದ್ದರು. ಇದೀಗ ಮಗದೊಮ್ಮೆ ಕಾಂಗ್ರೆಸ್ ಸೇರ್ಪಡೆ ಹಾದಿಯನ್ನು ಸ್ಪಷ್ಟಪಡಿಸಿದ್ದಾರೆ.

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸದಾಶಿವ ನಗರದ ಉಪಮುಖ್ಯಮಂತ್ರಿ ಡಿ.ಕೆ.. ಶಿವಕುಮಾರ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಸಂಸದ ಡಿ.ಕೆ. ಸುರೇಶ​, ಸಚಿವ ಜಮೀರ್​ ಅಹ್ಮದ್​, ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊದಲಾದವರು ಇದ್ದರು. ಈ ಬೆಳವಣಿಗೆಯಿಂದ ಯೋಗೇಶ್ವರ ಅವರು ಚನ್ನಪಟ್ಟಣದ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತವಾದಂತಾಗಿದೆ.
ಈಗಾಗಲೇ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ ಅವರು ಬಿಜೆಪಿ ಪ್ರಾಥಮಿಕ ಸದಸ್ಯತವಕ್ಕೂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಸೇರ್ಪಡೆ ಎಂಬುದು ಈಗ ಕೇವಲ ಔಪಚಾರಿಕವಾಗಿ ಉಳಿದಿದೆಯಷ್ಟೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ