Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆ.ಎಲ್. ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಯಶಸ್ವಿ

ಜನಜೀವಾಳ ಜಾಲ : ಬೆಳಗಾವಿ : ವಿಜ್ಞಾನ ಜೀವನದ ಹಾಸು ಹೊಕ್ಕಾಗಿದೆ. ವಿಜ್ಞಾನ ವಿಲ್ಲದೆ ಜಗತ್ತೇ ಇಲ್ಲ ಎಂಬಂತ ಸ್ಥಿತಿ ಈಗ ನಿರ್ಮಾಣವಾಗಿದೆ. ಯಶಸ್ಸು ಕಾಣಬೇಕಾದರೆ ಮೂರು ಮಜಲುಗಳಾದ ನಿರ್ದಿಷ್ಟ ಗುರಿ, ಸತತ ಪ್ರಯತ್ನ, ನಿರ್ದಿಷ್ಟ ಛಲ ಇವೆಲ್ಲ ಇರಲೇಬೇಕು ಎಂದು ಜಿ ಎ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಮಹಾಂತೇಶ ಮಗದುಮ್ಮ ಹೇಳಿದರು.

ಕೆ.ಎಲ್. ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜ್ಞಾನ ಮಾದರಿಗಳ ಪ್ರದರ್ಶನ ಅಗಸ್ತ್ಯ ಫೌಂಡೆಶನ್‌ ಅವರ ಸಹಯೋಗದೊಂದಿಗೆ ಯುವಆಚಾಯ೯ ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ, ವಿಜ್ಞಾನ ಶಿಕ್ಷಕರು ಅನೇಕ ಸವಾಲುಗಳನ್ನು ಅರಿತುಕೊಂಡು ಪ್ರಾಯೋಗಿಕವಾಗಿ ತಮ್ಮನ್ನು ತಾವು ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳ ಮನೋಮಟ್ಟಕ್ಕೆ ಅನುಗುಣವಾಗಿ ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಶಿಕ್ಷಕ ತಪ್ಪು ಮಾಡಿದರೆ ಈ ಜನಾಂಗವೇ ತೊಂದರೆ ಅನುಭವಿಸಬೇಕಾಗುತ್ತದೆ ಈ ನಿಟ್ಟಿನಲ್ಲಿ ಶಿಕ್ಷಕರಾದವರು ಯೋಚಿಸಬೇಕಾಗಿದೆ ಮಾರ್ಮಿಕವಾಗಿ ಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸ್ಪಧೆ೯ಯಲ್ಲಿ ಭಾಗವಹಿಸಿ ಗೆದ್ದಂತಹ ವಿದ್ಯಾಥಿ೯ಗಳಿಗೆ ಬಹುಮಾನವನ್ನು ಪ್ರಾಚಾರ್ಯ ಡಾ. ವಿ. ಪಿ. ಕುರಿ ವಿತರಿಸಿದರು. ಮುಖ್ಯ ಅಥಿತಿಗಳಾದ ಸಂಗಮೇಶ ಅಂಗಡಿ, ಕಾಯ೯ಕ್ರಮದ ಸಂಯೋಜಕಿ ಭುವನೇಶ್ವರಿ ಪಾಟೀಲ ಹಾಗೂ ಎಲ್ಲ ಸಿಬ್ಬಂದಿ ವಗ೯ದವರು ಹಾಗೂ ಪ್ರಶಿಕ್ಷಣಾಥಿ೯ಗಳು ಹಾಜರಿದ್ದರು.

ವಿಜ್ಞಾನ ವಿಭಾಗದ ಶಿಕ್ಷಣಾರ್ಥಿಗಳು ತಯಾರಿಸಿದಂತಹ ಮಾದರಿಗಳನ್ನು ಬಿ. ಎಸ್.‌ ಹಂಚಿನಾಳ ಪ್ರಾಥಮಿಕ ಶಾಲಾ ವಿದ್ಯಾಥಿ೯ಗಳು ವಿಕ್ಷಿಸಿ ಜ್ಞಾನವನ್ನು ಪಡೆದುಕೊಂಡರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು