Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಕಾಕನಲ್ಲಿ ಅಚ್ಚರಿ ಬೆಳವಣಿಗೆ : ಅಶೋಕ ಪೂಜಾರಿ ನಡೆ ನಿಗೂಢ !

 

ಬೆಳಗಾವಿ :
ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಮೊದಲಿನಿಂದಲೂ ರಮೇಶ ಜಾರಕಿಹೊಳಿ ವಿರುದ್ಧ ಸ್ಪರ್ಧೆ ನಡೆಸುತ್ತಾ ಬಂದಿರುವ ಅಶೋಕ ಪೂಜಾರಿ ಅವರಿಗೆ ಕಾಂಗ್ರೆಸ್ ಕೈ ತಪ್ಪಿದೆ. ಈ ಹಿನ್ನಲೆಯಲ್ಲಿ ಅವರ ನಡೆ ಈಗ ನಿಗೂಢವಾಗಿದೆ.

ಅಶೋಕ ಪೂಜಾರಿ ಮೊದಲಿನಿಂದಲೂ ಜೆಡಿಎಸ್ ಜೊತೆ ಗುರುತಿಸಿಕೊಂಡಿದ್ದರು. ಆದರೆ, ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಂಸದರಾಗಿದ್ದ ಸುರೇಶ ಅಂಗಡಿ ಅವರಿಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಅವರು ಬಿಜೆಪಿ ಸೇರ್ಪಡೆಗೊಂಡು ರಮೇಶ ಜಾರಕಿಹೊಳಿ ಅವರನ್ನು ಎದುರಿಸಿದ್ದರು. ಆದರೆ, ಕಾಲನಂತರ ರಮೇಶ ಜಾರಕಿಹೊಳಿ ಬಿಜೆಪಿ ಸೇರ್ಪಡೆಗೊಂಡರು. ಇದರಿಂದ ಅಶೋಕ ಪೂಜಾರಿ ಮತ್ತೆ ಪಕ್ಷ ಬದಲಾವಣೆ ಮಾಡಬೇಕಾಯಿತು. ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ರಾಜಕೀಯ ಅಸ್ತಿತ್ವ ಕಂಡುಕೊಂಡರು. ಕಾಂಗ್ರೆಸ್ ಈ ಬಾರಿ ತಮಗೆ ಟಿಕೆಟ್ ನೀಡುತ್ತದೆ ಎಂದು ಭಾವಿಸಿದ್ದರು. ಆದರೆ, ಈಗ ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿ ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಶೋಕ್ ಪೂಜಾರಿ ಅವರ ಬದಲಿಗೆ ಮಹಾಂತೇಶ ಕಡಾಡಿ ಅವರಿಗೆ ಟಿಕೆಟ್ ನೀಡುವ ಮೂಲಕ ಅವರ ರಾಜಕೀಯಕ್ಕೆ ಹಿನ್ನಡೆಯನ್ನು ಉಂಟುಮಾಡಿದೆ. ಈ ಹಿನ್ನಲೆಯಲ್ಲಿ ಅಶೋಕ ಪೂಜಾರಿ ಮತ್ತೆ ಜೆಡಿಎಸ್ ಸೇರ್ಪಡೆಗೊಳ್ಳುತ್ತಾರೋ ಅಥವಾ ಕಾಂಗ್ರೆಸ್‌ನಲ್ಲೇ ಉಳಿಯುತ್ತಾರೋ ಎನ್ನುವುದು ಕಾದು ನೋಡಬೇಕಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ