Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬಂಬರಗಾ ಬಳಿ ಟಿಪ್ಪರ- ಕಾರು ಮಧ್ಯೆ ಭೀಕರ ಅಪಘಾತ; ಇಬ್ಬರು ಸಜೀವ ದಹನ ..!

ಬಂಬರಗಾ ಬಳಿ ಟಿಪ್ಪರ- ಕಾರು ಮಧ್ಯೆ ಭೀಕರ ಅಪಘಾತ; ಇಬ್ಬರು ಸಜೀವ ದಹನ ..!

ಇಬ್ಬರಿಗೆ ಗಂಭೀರ ಗಾಯ, ಸುಟ್ಟು ಕರಕಲಾದ ವಾಹನಗಳು.

ಟಿಪ್ಪರ ಚಾಲಕ ಪರಾರಿ; ಸ್ಥಳಕ್ಕೆ ಧಾವಿಸಿದ ಕಾಕತಿ ಪೊಲೀಸರು.

ಮದುವೆ ಮುಗಿಸಿ ಮನೆ ಸೇರದ ಯುವಕ..!

ಬೆಳಗಾವಿ: ದೇವಗಿರಿ ಹಾಗೂ ಬಂಬರಗಾ ಗ್ರಾಮಗಳ ಮಧ್ಯೆ ಇರುವ ಸರ್ಕಲ್ ನಲ್ಲಿ ಟಿಪ್ಪರ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ವರ್ಷದ ಬಾಲಕಿ ಹಾಗೂ 26 ವರ್ಷದ ಯುವಕ ಕಾರಿನಲ್ಲೇ ಸಜೀವ ದಹನವಾಗಿದ್ದಾರೆ.

ನಿನ್ನೆ ರಾತ್ರಿ 10: 30 ಗಂಟೆ ಸುಮಾರಿಗೆ ಕಂಗ್ರಾಳಿ ಕೆ ಎಚ್ ಗ್ರಾಮದ ಕಡೆಯಿಂದ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಕಾರಿನಲ್ಲಿ ಸ್ವಗ್ರಾಮ ಬಂಬರಗಾ ಗ್ರಾಮಕ್ಕೆ ಹೋಗತ್ತಿದ್ದ ಸಮಯದಲ್ಲಿ ಕೇದನೂರ ಗ್ರಾಮದ ಕಡೆಯಿಂದ ಬೂತರಾಮನಹಟ್ಟಿ ಗ್ರಾಮದ ಕಡೆಗೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಸಮಯದಲ್ಲಿ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಡಿಸೇಲ್ ಟ್ಯಾಂಕ್ ಒಡೆದು ಕಾರು ಹಾಗೂ ಟಿಪ್ಪರ ಬೆಂಕಿಗಾಹುತಿ ಆಗಿವೆ. ಇ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಉಳಿದಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಂಬರಗಾ ಗ್ರಾಮದ 26 ವರ್ಷದ ಮೋಹನ ಮಾರುತಿ ಬೆಳಗಾಂಕರ ಹಾಗೂ ಮಚ್ಚೆ ಗ್ರಾಮದ 11 ವರ್ಷದ ಸಮೀಕ್ಷಾ ಸಾಗರ ಡೋಳೆಕರ ಕಾರಿನಲ್ಲೇ ಮೃತಪಟ್ಟ ದುರ್ದೈವಿಗಳು.

ಅದೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೊಬ್ಬ ಮಹೇಶ ಬೆಳಗಾಂವಕ ಹಾಗೂ ಸ್ನೇಹಾ ಬೆಳಗುಂದಕರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಗ್ರಾಮದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಮಂಜುನಾಥ ಹಲಕುಂದ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ತಿವ್ರ ತನಿಖೆ ಕೈಗೊಂಡಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು