Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತಿಯ ಸಹೋದರಿಯನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ವಿಚ್ಛೇದನ ಪಡೆದ ಮಹಿಳೆ…!

Advertisement

ಸಾಮಾನ್ಯವಾಗಿ ದಂಪತಿಗಳು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದಾಗ ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ಅಥವಾ ಪರಸ್ಪರ ಭಿನ್ನಾಭಿಪ್ರಾಯಗಳ ಕಾರಣ ನೀಡುತ್ತಾರೆ. ಆದರೆ, ಮಧ್ಯಪ್ರದೇಶದ ಮಹಿಳೆಯೊಬ್ಬಳು ವಿಚ್ಛೇದನ ಪಡೆಯಲು ತನ್ನ ಪತಿಯ ಸ್ವಂತ ಅಕ್ಕನನ್ನೇ ಆತನ ಎರಡನೇ ಪತ್ನಿ ಎಂದು ಬಿಂಬಿಸಿ ನ್ಯಾಯಾಲಯವನ್ನೇ ದಿಕ್ಕು ತಪ್ಪಿಸಿರುವ ವಿದ್ಯಮಾನ ನಡೆದಿದೆ

ಎಂದು ವರದಿಯಾಗಿದೆ.

ಈ ವಿಚಿತ್ರ ಪ್ರಕರಣವು ಈಗ ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠದ ಮುಂದೆ ಬಂದಿದೆ. ತನ್ನ ಪತ್ನಿ ನೀಡಿದ ದಾರಿತಪ್ಪಿಸುವ ಪುರಾವೆಗಳ ಆಧಾರದ ಮೇಲೆ ನೀಡಲಾದ ಏಕಪಕ್ಷೀಯ ವಿಚ್ಛೇದನ ತೀರ್ಪನ್ನು ಪತಿ ಈಗ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಗ್ವಾಲಿಯರ್ ನಿವಾಸಿಯಾದ ಈ ಮಹಿಳೆ 1998ರಲ್ಲಿ ಮಾರ್ಕೆಟಿಂಗ್ ಕಂಪನಿಯ ಅಧಿಕಾರಿಯೊಬ್ಬರನ್ನು ವಿವಾಹವಾಗಿದ್ದರು. ಪತಿ ಕೆಲಸದ ನಿಮಿತ್ತ ಮನೆಯಿಂದ ದೂರವಿರುತ್ತಿದ್ದ ಕಾರಣ ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. 2015ರಿಂದ ಮಹಿಳೆ ಪತಿಯಿಂದ ಬೇರೆಯಾಗಿ ವಾಸಿಸುತ್ತಿದ್ದರು.

ಮಹಿಳೆಗೆ ವಿಚ್ಛೇದನ ಬೇಕಿತ್ತಾದರೂ, ಪತಿ ಅದಕ್ಕೆ ಸಿದ್ಧನಿರಲಿಲ್ಲ. ಹೀಗಾಗಿ 2021ರಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ, ತನ್ನ ಪತಿ ಎರಡನೇ ಮದುವೆಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ವಿಚ್ಛೇದನಕ್ಕೆ ಪುರಾವೆಯಾಗಿ ಆಕೆ ಒಂದು ಕುಟುಂಬದ ಗುಂಪು ಫೋಟೋವನ್ನು (Family Group Photo) ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆ ಫೋಟೋದಲ್ಲಿ ತನ್ನ ಪತಿಯ ಪಕ್ಕದಲ್ಲಿ ನಿಂತಿದ್ದ ಮಹಿಳೆಯನ್ನು ಆತನ ‘ಎರಡನೇ ಪತ್ನಿ’ ಎಂದು ಹೇಳಿದ್ದರು. ವಾಸ್ತವವಾಗಿ ಆ ಫೋಟೋದಲ್ಲಿದ್ದವರು ಆಕೆಯ ಪತಿಯ ಸ್ವಂತ ಅಕ್ಕ!

ಈ ಫೋಟೋವನ್ನೇ ಪ್ರಬಲ ಸಾಕ್ಷ್ಯ ಎಂದು ಪರಿಗಣಿಸಿದ ಕೌಟುಂಬಿಕ ನ್ಯಾಯಾಲಯವು, ಪತಿಗೆ ತನ್ನ ವಾದ ಮಂಡಿಸಲು ಅವಕಾಶ ನೀಡದೆ ವಿಚ್ಛೇದನ ಮಂಜೂರು ಮಾಡಿತ್ತು ಎನ್ನಲಾಗಿದೆ.

ಬಯಲಾಗಿದ್ದು ಹೇಗೆ?

ಏಪ್ರಿಲ್ ಮೊದಲ ವಾರದಲ್ಲಿ ವಿಚ್ಛೇದನದ ಆದೇಶದ ಬಗ್ಗೆ ತಿಳಿದ ಪತಿಗೆ ಶಾಕ್ ಕಾದಿತ್ತು. ಕೂಡಲೇ ನ್ಯಾಯಾಲಯದ ದಾಖಲೆಗಳನ್ನು ಪರಿಶೀಲಿಸಿದಾಗ, ತನ್ನ ಅಕ್ಕನ ಫೋಟೋವನ್ನೇ ಎರಡನೇ ಹೆಂಡತಿಯ ಫೋಟೋ ಎಂದು ಬಳಸಿರುವುದು ಕಂಡುಬಂದಿದೆ.

ಈಗ ಪತ್ನಿಯು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ವಿಚ್ಛೇದನ ಪಡೆದಿದ್ದಾರೆ ಎಂದು ಪತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಸ್ತುತ ಮಧ್ಯಪ್ರದೇಶ ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ಸುಳ್ಳು ಮಾಹಿತಿಯ ಆಧಾರದ ಮೇಲೆ ನೀಡಲಾದ ವಿಚ್ಛೇದನ ಆದೇಶವನ್ನು ರದ್ದುಗೊಳಿಸುವಂತೆ ಪತಿ ಮನವಿ ಮಾಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ