Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

ಕಾರವಾರ : ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38 ವರ್ಷದ ಅಮಿತ್ ಮಾಳಸೇರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ತಮ್ಮ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ