ನವ ದೆಹಲಿ : ಆಧಾರ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದು ಇದ್ದು, ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಿಸಿದೆ.
ಹೀಗಾಗಿ ಆಧಾರ್ ಕಾರ್ಡ್ ಹೊಂದಿರುವ ನಾಗರಿಕರು ಯಾವುದೇ ಶುಲ್ಕವಿಲ್ಲದೆ ಆನ್‌ಲೈನ್‌ನಲ್ಲಿ 2027ರ ಜೂನ್ 14 ರವರೆಗೆ ದಾಖಲೆಗಳನ್ನು ನವೀಕರಿಸಬಹುದಾಗಿದೆ.
ಈ ಕುರಿತು ಮಾಹಿತಿ ನೀಡಿದ ಯುಐಡಿಎಐ, ಮೈಆಧಾರ್ ಪೋರ್ಟಲ್ ಮೂಲಕ ಜನರು ತಮ್ಮ ದಾಖಲೆಗಳನ್ನು ಉಚಿತವಾಗಿ ನವೀಕರಿಸುತ್ತಿದ್ದು, ಬಾಕಿ ಇರುವ ಜನರಿಗೆ ಅವಕಾಶ ಕಲ್ಪಿಸಲು ವಿಸ್ತರಣೆ ಮಾಡಲಾಗಿದೆ. ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿ ಇನ್ನು ದಾಖಲೆಗಳನ್ನು ನವೀಕರಿಸದ ನಾಗರಿಕರು, ತಮ್ಮ ಗುರುತಿನ ಚೀಟಿ ಮುಂತಾದ ದಾಖಲೆ ನವೀಕರಿಸಬೇಕಾಗುತ್ತದೆ
