Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ್ ಜವಳಕರ ಬಂಧನ !

 

ಬೆಳಗಾವಿ :
ಮೊಬೈಲ್ ಟವರ್ ವಿಷಯವಾಗಿ ರಮೇಶ ಪಾಟೀಲ ಎಂಬುವರ ಮೇಲೆ ಹಲ್ಲೆ ಎಸಗಿದ ಆರೋಪದ ಮೇರೆಗೆ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ್ ಜವಳಕರ ಅವರನ್ನು ಪೊಲೀಸರು ರವಿವಾರ ತಡರಾತ್ರಿ ಬಂಧಿಸಿದ್ದಾರೆ.

ಅವರ ಬಂಧನಕ್ಕೆ ಒತ್ತಾಯಿಸಿ ಎಂಇಎಸ್ ಮುಖಂಡ ರಮಾಕಾಂತ ಕೊಂಡುಸ್ಕರ ಅವರ ನೇತೃತ್ವದಲ್ಲಿ ರವಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಟಿಳಕವಾಡಿ ಪೊಲೀಸರು ರವಿವಾರ ತಡರಾತ್ರಿ ಜವಳ್ಕರ್ ಅವರನ್ನು ಬಂಧಿಸಿದ್ದಾರೆ.

 

ಮೊಬೈಲ್ ಟವರ್ ಅಳವಡಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಭಿಜಿತ್ ಜವಳಕರ್ ಮತ್ತು ಸ್ಥಳೀಯ ನಿವಾಸಿ ರಮೇಶ ಪಾಟೀಲ ನಡುವೆ ಕಳೆದ ಗುರುವಾರ ಭಾಗ್ಯನಗರದಲ್ಲಿ ತೀವ್ರ ವಾಗ್ವಾದ ನಡೆದಿತ್ತು.

ಘಟನೆಯ ನಂತರ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿ ರಮೇಶ ಪಾಟೀಲ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಈ ನಡುವೆ ಭಾನುವಾರ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶ್ರೀರಾಮಸೇನೆ ಹಿಂದೂಸ್ತಾನ್ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಅಭಿಜಿತ್ ವಿರುದ್ದ ಕ್ರಮಕ್ಕೆ ಒತ್ತಾಯಿದ್ದರು.

ಭಾಗ್ಯ ನಗರದ 9ನೇ ಕ್ರಾಸ್‌ನ ಮನೆ ಮೇಲೆ ಮೊಬೈಲ್‌ ಟವರ್‌ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ, ರಮೇಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

 

ಮೊಬೈಲ್ ಟವರ್‌ ಅಳವಡಿಸಲು ಮುಂದಾಗಿದ್ದ ರಮೇಶ ಪಾಟೀಲ ಅವರ ಮೇಲೆ ಅಭಿಜಿತ ಜವಳಕರ ಹಲ್ಲೆ ನಡೆಸಿರುವುದು ಖಂಡನೀಯ. ಒಬ್ಬರ ಮನೆ ಮೇಲೆ ಮೊಬೈಲ್‌ ಟವರ್‌ ಅಳವಡಿಸುತ್ತಿರುವುದನ್ನು ತಪಾಸಿಸುವ ಅಧಿಕಾರ ಇವರಿಗೆ ಯಾರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದರು.

ಸ್ಥಳೀಯ ಶಾಸಕರ ಪ್ರಭಾವದಿಂದಾಗಿ ಪೊಲೀಸರು ರಮೇಶ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ. ಇದನ್ನು ಹಿಂದಕ್ಕೆ ಪಡೆಯಬೇಕು. ತಕ್ಷಣವೇ ಅಭಿಜಿತ್ ಜವಳಕರ ಬಂಧಿಸಬೇಕು ಎಂದು ಆಗ್ರಹಿಸಿದ್ದರು.

ನಂತರ ಪೊಲೀಸರು ಅಭಿಜಿತ್ ಜವಳಕರ ಅವರನ್ನು ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.
ಅವರ ಮೇಲೆ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 392 ರ ಅಡಿಯಲ್ಲಿ ಪ್ರಕರಣ ದಾಖಲಾಗಿಲಾಗಿದೆ.

ರಮೇಶ ಪಾಟೀಲ ವಿರುದ್ಧವೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 506,394,307,504,147,143,148 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ