Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ ನಟ, ಬಿಗ್‌ ಬಾಸ್‌ ಖ್ಯಾತಿಯ ಪ್ರಥಮ್‌ ಅವರ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ದೊಡ್ಡಬಳ್ಳಾಪುರ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದರ್ಶನ್‌ ಫ್ಯಾನ್ಸ್‌ ಎನ್ನಲಾಗಿದ್ದ ಕೆಲವರ ವಿರುದ್ಧ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರಿಗೆ ಹೋಗಿ ವಾಪಸ್‌ ಠಾಣೆಗೆ ಆಗುವಾಗ ಅವರ ಮುಖಕ್ಕೆ ಪೊಲೀಸರ ಸಮ್ಮುಖದಲ್ಲೇ ಮಸಿ ಬಳಿಯಲು ಯತ್ನಿಸಲಾಗಿದೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಸ್ಥಳ ಮಹಜರುಮುಗಿಸಿ ವಾಪಸ್ ಹೋಗುವ ವೇಳೆ ಠಾಣೆಯ ಮುಂದೆ ಜಮಾಯಿಸಿದ ಅಂಬೇಡ್ಕರ ಭೀಮ ಸೇನೆಯ ಕಾರ್ಯಕರ್ತರು ಪ್ರಥಮ್ ಅವರನ್ನು ತರಾಟೆಗೆ ತೆಗೆದುಕೊಂಡರು. ಆಗ ಪ್ರಥಮ್​ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಲು ಮುಂದಾದರು. ಅಷ್ಟರಲ್ಲಿ ಅವರ ಮುಖಕ್ಕೆ ಕಾರ್ಯಕರ್ತನೋರ್ವ ಮುಖಕ್ಕೆ ಮಸಿ ಬಳಿಯಲು ಪ್ರಯತ್ನಿಸಿದ್ದು, ಪೊಲೀಸರು ತಕ್ಷಣವೇ ಅವರನ್ನು ಅಲ್ಲಿಂದ ಕರೆದೊಯ್ದರು. ಈ ಘಟನೆಯ ವೀಡಿಯೊ ವೈರಲ್‌ ಆಗಿದೆ.

ಗುರುವಾರ (ಜುಲೈ 31) ಪ್ರಥಮ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ಸಲುವಾಗಿ ಅವರನ್ನು ಸ್ಥಳ ಮಹಜರಿಗೆ ಅವರನ್ನು ಕರೆದುಕೊಂಡು ಹೋಗಲಾಯಿತು. ಮಹಜರು ಮುಗಿಸಿ ಮತ್ತೆ ಠಾಣೆಗೆ ಬಂದಾಗ ಅವರನ್ನು ದಲಿತ ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದರು. ಜುಲೈ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡುವ ಸಮಯದಲ್ಲಿ ಪ್ರಥಮ್ ಡಾ.ಬಿ.ಆರ್‌. ಅಂಬೇಡ್ಕರ ಮತ್ತು ಸಂವಿಧಾನದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಭೀಮ ಸೇನೆ ಕಾರ್ಯಕರ್ತರು ಪ್ರಥಮ್​ ಅವರಿಗೆ ಕ್ಷಮೆ ಕೇಳುವಂತೆ ಒತ್ತಾಯಿಸಿದರು. ಈ ವೇಳೆ ಕಾರ್ಯಕರ್ರೊಬ್ಬರು ಅವರ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದರು. ಕೂಡಲೇ ಪ್ರಥಮ್ ಅವರನ್ನು ರಕ್ಷಿಸಿದ ಪೊಲೀಸರು ಠಾಣೆಯೊಳಗೆ ಕರೆದೊಯ್ದರು ಎಂದು ವರದಿಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ