Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ನಟಿ ಪೂಜಾ ಗಾಂಧಿ ಮದುವೆ




ಬೆಂಗಳೂರು :
ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನವೆಂಬರ್ 29ರಂದು ಬುಧವಾರ ಸಂಜೆ ತಾನು ಕುವೆಂಪು ಆಶಯದಂತೆ ಮಂತ್ರ ಮಾಂಗಲ್ಯದ ಮೂಲಕ ವಿಜಯ ಘೋರ್ಪಡೆ ಅವರ ಜೊತೆ ಮದುವೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನನ್ನ ಮದುವೆಗೆ ಕುಟುಂಬ ಸಮೇತರಾಗಿ ನೀವು ಬಂದು ಹರಸಿ, ಆಶೀರ್ವದಿಸಿ. ಮದುವೆ ಸಮಯದಲ್ಲಿ ಯಾವುದೇ ಕ್ಯಾಮೆರಾಗಳಿಗೆ ಅವಕಾಶವಿಲ್ಲ. ಅನ್ಯಥಾ ಭಾವಿಸಬೇಡಿ. ನಾವೇ ನಿಮಗೆ ಸಾಧ್ಯವಾದಷ್ಟು ಪೋಟೋಗಳನ್ನು ಮತ್ತು ದೃಶ್ಯಗಳನ್ನು ತಲುಪಿಸುತ್ತೇವೆ. ನನ್ನ ಚಿತ್ರ ಜೀವನದ ಎಲ್ಲ ಬೆಳವಣಿಗೆಯಲ್ಲಿ ನೀವು ನನ್ನ ಜೊತೆಯಾಗಿದ್ದೀರಿ. ನನ್ನ ಮದುವೆಗೆ ಬಂದು ಹರಸಿ, ಹಾರೈಸಿ ಎಂದು ಅವರು ಕೋರಿದ್ದಾರೆ.
ವಿಜಯ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ. ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ ಅವರು ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು.

ಬಾಲಿವುಡ್‌, ಕಾಲಿವುಡ್‌ನಲ್ಲಿ ನಟಿಸಿದ್ದ ಪೂಜಾ ಅವರ ಸಿನಿ ಬದುಕಿಗೆ ತಿರುವು ನೀಡಿದ್ದ ಸಿನಿಮಾ, ಯೋಗರಾಜ್‌ ಭಟ್‌ ನಿರ್ದೇಶನದ ‘ಮುಂಗಾರು ಮಳೆ’. ಈ ಸಿನಿಮಾ ಬಳಿಕ ‘ಮಿಲನ’, ‘ಕೃಷ್ಣ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಪೂಜಾ ನಟಿಸಿದರು. ಜೊತೆಗೆ ತಮಿಳು ಸಿನಿಮಾಗಳಲ್ಲೂ ಕಾಣಿಸಿಕೊಂಡರು. ‘ದಂಡುಪಾಳ್ಯ’, ‘ಅಭಿನೇತ್ರಿ’ ಸಿನಿಮಾಗಳ ಬಳಿಕ ಸಣ್ಣ ಬ್ರೇಕ್‌ ತೆಗೆದುಕೊಂಡಿದ್ದರು. 2020ರ ಆರಂಭದಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಈ ಅವಧಿಯಲ್ಲಿ ನಟನೆಯಿಂದ ದೂರವೇ ಉಳಿದಿದ್ದರು. ಇತ್ತೀಚೆಗೆ ‘ಸಂಹಾರಿಣಿ’ ಎಂಬ ಚಿತ್ರದಲ್ಲಿ ಪೂಜಾ ಕಾಣಿಸಿಕೊಂಡಿದ್ದರು.

ಕನ್ನಡ ಕಲಿಕೆ

ಸಿನಿಮಾದಿಂದ ಬ್ರೇಕ್‌ ತೆಗೆದುಕೊಂಡಿದ್ದ ಪೂಜಾ ಗಾಂಧಿ ಅವರು ಕನ್ನಡ ಕಲಿಕೆಯತ್ತ ಆಸಕ್ತಿ ತೋರಿದ್ದರು. ಕಳೆದ ಎರಡು ವರ್ಷಗಳಿಂದ ಕನ್ನಡದ ಅಕ್ಷರಗಳು, ವರ್ಣಮಾಲೆಯನ್ನು ಮಕ್ಕಳಂತೆ ಅವರು ಅಭ್ಯಾಸ ಮಾಡಿದ್ದಾರೆ. ಹಂತಹಂತವಾಗಿ ವಾಕ್ಯ ರಚನೆಯನ್ನೂ ಅವರು ಕಲಿತಿದ್ದಾರೆ. ಕನ್ನಡದ ಮೇಲಿನ ಅವರ ಪ್ರೀತಿಗೆ ಅವರೇ ಕನ್ನಡದಲ್ಲಿ ಬರೆದ ಮದುವೆ ಆಮಂತ್ರಣವೇ ಸಾಕ್ಷ್ಯವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ