Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರ ಆಯ್ತು, ಈಗ ಆಂಧ್ರಪ್ರದೇಶದಲ್ಲೂ ಕನ್ನಡಕ್ಕೆ ಕುತ್ತು..!

ಬೆಳಗಾವಿ : ಕರ್ನಾಟಕದ ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲೂ ಸಹ ಕನ್ನಡ ಭಾಷೆಗೆ ಹಾಗೂ ಕನ್ನಡ ಕಲಿಕೆಗೆ ಕೊಡಲಿ ಪೆಟ್ಟು ನೀಡುವಂತಹ ಶಿಕ್ಷಣ ನೀತಿಯನ್ನು ಅನುಸರಿಸಲು ಆರಂಭಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಆಂದ್ರಪ್ರದೇಶದ 1೦೦೦ ಮಾಧ್ಯಮಿಕ ಶಾಲೆಗಳಲ್ಲಿ ಸಿ.ಬಿ.ಎಸ್.ಸಿ. ಪಠ್ಯಕ್ರಮವನ್ನು ಅನುಷ್ಠಾನಗೊಳಿಸಲು ಅಲ್ಲಿಯ ಸರಕಾರ ನಿರ್ಧರಿಸಿದೆ.

ಈ ಬಗ್ಗೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ರಾಜ್ಯ ಸರಕಾರದ ಗಮನ ಸೆಳೆದಿದ್ದಾರೆ.

ಈ ಪಠ್ಯಕ್ರಮದ ಅನ್ವಯ ಮೊದಲನೆಯ
ವಿಷಯವನ್ನಾಗಿ ಇಂಗ್ಲೀಷ್ ಮತ್ತು ಸಾಹಿತ್ಯ, ಎರಡನೇ ವಿಷಯವಾಗಿ ತೆಲುಗು, ಮೂರನೇ ವಿಷಯವನ್ನಾಗಿ
ಗಣಿತ, ನಾಲ್ಕನೇ ವಿಷಯವನ್ನಾಗಿ ವಿಜ್ಞಾನ, ಐದನೇ ವಿಷಯವನ್ನಾಗಿ ಸಮಾಜ, ಆರನೇ ವಿಷಯವನ್ನಾಗಿ
ಮಾಹಿತಿ ತಂತ್ರಜ್ಞಾನ ಅಥವಾ ಕೃತಕ ಬುದ್ದಿಮತ್ತೆ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಸಿ.ಬಿ.ಎಸ್.ಸಿ. ಪಠ್ಯಕ್ರಮದ ಪ್ರಕಾರ ಕನ್ನಡಿಗರ ಮಕ್ಕಳು ಕನ್ನಡ ಆಯ್ಕೆ ಮಾಡಿಕೊಳ್ಳವ
ಅವಕಾಶವೇ ಇಲ್ಲ. ಕರ್ನೂಲು ಜಿಲ್ಲೆಯ ಹೊಳಗುಂದ ಜಿಲ್ಲಾ ಪರಿಷತ್ ಪ್ರೌಢಶಾಲಾ ದೊಡ್ಡಹರಿವಾಣದ ಜಿಲ್ಲಾ
ಪರಿಷತ್ ಪೌಢಶಾಲೆ ಕೌತಾಳಂ ಜಿಲ್ಲಾ ಪರಿಷತ್ ಪ್ರೌಢಶಾಲಾ ಹಾಗೂ ಬದನಹಾಳು ಜಿಲ್ಲಾ ಪರಿಷತ್
ಪ್ರೌಢಶಾಲೆಗಳಲ್ಲಿ ಕನ್ನಡಿಗರ ಮಕ್ಕಳು ಅನಿವಾರ್ಯವಾಗಿ ಇಂಗ್ಲೀಷ್ ಅಥವಾ ತೆಲುಗು ಮಾಧ್ಯಮದಲ್ಲಿಯೇ
ಕಲಿಯಬೇಕಾಗಿದೆ. ಈವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ಮಕ್ಕಳಿಗೆ, ಆಂಧ್ರಪ್ರದೇಶ ಸರಕಾರ ದಿ. ೦7-1೦-
2023 ರ ಆದೇಶದಿಂದಾಗಿ ಕೊಡಲಿ ಪೆಟ್ಟು ಹಾಕಿದಂತಾಗಿದೆ. ಆಂಧ್ರಪ್ರದೇಶದ ಗಡಿಯಲ್ಲಿರುವ ಭಾಷಾ
ಅಲ್ಪಸಂಖ್ಯಾತರಾದ ಕನ್ನಡಿಗರು ಸರಕಾರದ ಆದೇಶದ ವಿರುದ್ಧ ಆಂದೋಲನ ನಡೆಸಿದರೂ ಸಹ ಯಾವುದೇ
ಪ್ರಯೋಜನವಾಗಿಲ್ಲ. ಕರ್ನಾಟದಲ್ಲಿರುವ ತೆಲಗು ಭಾಷಾ ಅಲ್ಪ ಸಂಖ್ಯಾತರಿಗೆ ನಮ್ಮ ಸರಕಾರ ಸಾಕಷ್ಟು ಶೈಕ್ಷಣಿಕ
ಸೌಲಭ್ಯಗಳನ್ನು ಒದಗಿಸುತ್ತ ಬಂದಿದೆ. ಆದರೆ ನರೆಯ ಆಂಧ್ರಪ್ರದೇಶವು ಕನ್ನಡದ ಕತ್ತು ಹಿಸುಕುವ
ಕೆಲಸವನ್ನು ಮಾಡುತ್ತಿರುವುದು ಖಂಡನೀಯವಾಗಿದೆ.

ಈ ಹಿನ್ನೆಲೆಯಲ್ಲಿ ತಾವು ಆಂಧ್ರಪ್ರದೇಶದ ಸರಕಾರದೊಡನೆ ಅಲ್ಲಿನ ಶಿಕ್ಷಣ ನೀತಿಯ ಬಗ್ಗೆ
ಚರ್ಚಿಸಿ ಕನ್ನಡಿಗರ ಹಾಗೂ ಕನ್ನಡಿಗರ ಮಕ್ಕಳ ಹಿತವನ್ನು ಕಾಪಾಡಬೇಕೆಂದು ಕೋರುತ್ತೇವೆ ಎಂದು ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ