Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೆ ಲಕ್ಷ್ಮಣ ಸವದಿ ಚಾಣಕ್ಯ ತಂತ್ರ : ಶಿವಲೀಲಾ ಅಧ್ಯಕ್ಷೆ, ಭುವನೇಶ್ವರಿ ಉಪಾಧ್ಯಕ್ಷೆ

ಅಥಣಿ  : ಅಥಣಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಶಿವಲೀಲಾ ಬೂಟಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಭುವನೇಶ್ವರಿ ಬೀರಪ್ಪ ಯಕ್ಕಂಚಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



ಅಥಣಿ ಪುರಸಭೆಯಲ್ಲಿ ಒಟ್ಟು 27 ಸದಸ್ಯ ಬಲ ಹೊಂದಿದ್ದು  ಅಧ್ಯಕ್ಷ ಸ್ಥಾನ  ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಶಿವಲೀಲಾ ಬೂಟಾಳಿಯವರಿಂದ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು.ಉಪಾಧ್ಯಕ್ಷ ಸ್ಥಾನ ಓಬಿಸಿ ಮಹಿಳೆಗೆ ಮೀಸಲಾಗಿತ್ತು.ಭುವನೇಶ್ವರಿ ಬೀರಪ್ಪ ಯಕ್ಕಂಚಿ ಅವರಿಂದ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು.ಈ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನ  ಅಧ್ಯಕ್ಷ ಉಪಾಧ್ಯಕ್ಷರು  ಅವಿರೋಧವಾಗಿ ಅಧಿಕಾರದ ಗದ್ದುಗೆ ಏರಿದ್ದಾರೆ.ಇಂದು ಅಥಣಿ ಪುರಸಭೆ ಕಾಂಗ್ರೆಸ ತೆಕ್ಕೆಗೆ ಬಂದಿದ್ದು ಕಾಂಗ್ರೆಸ್ ಆಡಳಿತ ಪರ್ವ ಆರಂಭವಾಗಿದೆ .



ಈ ವೇಳೆ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾಧ್ಯಮಗಳೊಂದಿಗೆ  ಮಾತನಾಡಿ  ಅಥಣಿ ಪುರಸಭೆಗೆ  ಮುಂದಿನ 30 ತಿಂಗಳು ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಇಂದು ಜರುಗಿದೆ. ಅಥಣಿ ಅಭಿವೃದ್ಧಿ ದೃಷ್ಟಿಯಿಂದ ಯಾವುದೇ ಪಕ್ಷ ಭೇದವಿಲ್ಲದೆ  ಭಿನ್ನಾಭಿಪ್ರಾಯ ಇಲ್ಲದೆ ಈ ಆಯ್ಕೆ ಜರುಗಿದೆ. ಬಹಳಷ್ಟು ಹಳೆಯದಾದ ಪುರಸಭೆಗೆ     ಜೋಡಿ ಕೆರೆ ಅಭಿವೃದ್ಧಿ ಸೇರಿದಂತೆ   ಪಟ್ಟಣದಲ್ಲಿ ಹತ್ತು ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳ ಬೇಕಾಗಿದೆ. ಬರುವ ದಿನಮಾನದಲ್ಲಿ ಪುರಸಭೆ ಸರ್ವಾಂಗಿಣ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಈ ವೇಳೆ ತಹಶೀಲ್ದಾರ್ ಸಿದ್ದರಾಯ ಬೋಸಗಿ ಚುನಾವಣಾಧಿಕಾರಿಯಾಗಿ ಮತ್ತು ಸಹಾಯಕ ರಾಗಿ ಮಹಮ್ಮದ್ ರಫಿ ಯತ್ನಟ್ಟಿ ಹಾಗೂ ಶಶಿಕಾಂತ ಡಂಗಿ, ಬಸವರಾಜ್ ಡಾಬಳ್ಳಿ , ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ