Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೆ ವಿಜಯೇಂದ್ರ ಗುಡುಗು : ನಾಸೀರ್ ಹುಸೇನ್‍ರನ್ನು ಅಪರಾಧಿ ಎಂದು ಪರಿಗಣಿಸಿ ಸೇರಿಸಲು ಒತ್ತಾಯ

 

ಬೆಳಗಾವಿ : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‌ ಐಆರ್ ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ಬೆಳಗಾವಿಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಖಾಸಗಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಆಗದೆ ಇದ್ದಿದ್ದರೆ ಸರಕಾರ ಈ ದೇಶದ್ರೋಹಿಗಳನ್ನು ಬಂಧಿಸಲು ಮೀನಮೇಷ ಎಣಿಸುವ ಸಾಧ್ಯತೆ ಇತ್ತು ಎಂದು ಅನುಮಾನ ವ್ಯಕ್ತಪಡಿಸಿದರು.
ವಿಧಾನಸೌಧದ ಒಳಗೆ ಕೆಲವು ದೇಶದ್ರೋಹಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ನಂತರ ಬಿಜೆಪಿ ನಿರಂತರ ಹೋರಾಟದ ಪ್ರತಿಫಲವಾಗಿ ನಿನ್ನೆ ಮೂರು ದೇಶದ್ರೋಹಿಗಳನ್ನು ಬಂಧಿಸಿದ್ದಾರೆ. ಆದರೆ, ರಾಜ್ಯ ಸರಕಾರ ಇನ್ನೂ ಎಫ್.ಎಸ್.ಎಲ್ ವರದಿಯನ್ನು ಬಹಿರಂಗಪಡಿಸಿಲ್ಲ ಎಂದು ಆಕ್ಷೇಪಿಸಿದರು.
ಸರಕಾರ ಯಾವ ಕಾರಣಕ್ಕೆ ಎಫ್.ಎಸ್.ಎಲ್ ವರದಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು, ಇದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ಈ ದೇಶದ್ರೋಹಿ ಘಟನೆಯ ಸೂತ್ರಧಾರಿಗಳು ಯಾರು? ಪಾತ್ರಧಾರಿಗಳು ಯಾರು? ಎಂದು ಕೇಳಿದರು. ಪ್ರಮುಖರಾದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಹೆಸರನ್ನೇ ಪೊಲೀಸರು ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಜನಪ್ರತಿನಿಧಿ, ರಾಜ್ಯಸಭಾ ಸದಸ್ಯ ಆಗುವವರು ಸಂವಿಧಾನ ಮತ್ತು ದೇಶದ ಸಾರ್ವಭೌಮತ್ವ- ಅಖಂಡತೆಯನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರು ಪ್ರಮಾಣವಚನ ಸ್ವೀಕರಿಸಬಾರದು ಎಂದು ಅವರು ಒತ್ತಾಯಿಸಿದರು. ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಾದ ಉಪ ರಾಷ್ಟ್ರಪತಿಗಳಿಗೆ ಬಿಜೆಪಿ ವತಿಯಿಂದ ಇವತ್ತೇ ಪತ್ರ ಬರೆಯಲಿದ್ದೇವೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರಿಗೆ ಪ್ರಮಾಣವಚನ ಬೋಧಿಸದೆ ಇರಲು ಒತ್ತಾಯ ಮಾಡಲಿದ್ದೇವೆ ಎಂದರು.
ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕತೆ ಇದ್ದರೆ, ದೇಶಪ್ರೇಮ ಇದ್ದಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಂದು ಒತ್ತಾಯಿಸಿದರು. ನಾಸೀರ್ ಹುಸೇನ್ ಅವರು ಪ್ರಕರಣದಲ್ಲಿ ನಿರ್ದೋಷಿ ಎಂದು ಹೊರಕ್ಕೆ ಬರುವವರೆಗೆ ಅವರಿಗೆ ರಾಜ್ಯಸಭಾ ಸದಸ್ಯತ್ವದ ಪ್ರಮಾಣವಚನ ಸ್ವೀಕಾರಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹವನ್ನು ಮುಂದಿಟ್ಟರು.
ರಾಜ್ಯ ಸರಕಾರವು ಈ ವಿಷಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಯಾಕೆ ಒತ್ತಾಯ ಹಾಕುತ್ತಿದೆ? ಎಫ್‍ಎಸ್‍ಎಲ್ ವರದಿ ಬಹಿರಂಗಪಡಿಸಲು ಯಾಕೆ ಮೀನಮೇಷ ಮಾಡುತ್ತ ಇದ್ದೀರಿ? ಎಂದ ಅವರು, ಈ ವಿಚಾರವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿ ಎಂದು ಆಗ್ರಹಿಸಿದರು.
ದೇಶದ್ರೋಹದ ಪ್ರಶ್ನೆ ಬಂದಾಗ ಅವನು ಹಿಂದೂ, ಇವನು ಮುಸಲ್ಮಾನ ಎಂಬ ಪ್ರಶ್ನೆ ಉದ್ಭವವಾಗುವುದಿಲ್ಲ. ದೇಶದ್ರೋಹಿಗಳಿಗೆ ಯಾವುದೇ ಜಾತಿ, ಧರ್ಮ ಅಡ್ಡಿ ಬರಬಾರದು. ಈ ವಿಚಾರವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದಂತೆ ನಮಗಂತೂ ತೋರುತ್ತಿಲ್ಲ ಎಂದು ಆಕ್ಷೇಪ ಸೂಚಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ