Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.

ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು ಎಂದು ಹೇಳಿದ್ದಾರೆ.

ಮರಾಠ-ಮಾಳವಾ ಸಾಮ್ರಾಜ್ಯದ 18ನೇ ಶತಮಾನದ ರಾಣಿ ಪುಣ್ಯಶ್ಲೋಕ ಅಹಲ್ಯಾಬಾಯಿ ಹೋಳ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲು ಪ್ರಸ್ತಾಪಿಸಿತ್ತು.

ಅವರು ಅಹಮದ್‌ನಗರ ಜಿಲ್ಲೆಯ ಚೌಂಡಿಯಲ್ಲಿ ಜನಿಸಿದರು ಮತ್ತು ನಂತರ ಹೋಳ್ಕರ್ ರಾಜಮನೆತನದ ಖಂಡೇರಾವ್ ಹೋಳ್ಕರ್ ಅವರನ್ನು ವಿವಾಹವಾದರು. ಹೀಗಾಗಿ ಅವರ ಹೆಸರನ್ನು ಜಿಲ್ಲೆಗೆ ಇಡಲು ಪ್ರಸ್ತಾಪಿಸಲಾಗಿತ್ತು ಎಂದು ಅವರು ತಿಳಿಸಿದರು.
ಕೇಂದ್ರದ ಇದಕ್ಕೆ ಸಮ್ಮತಿ ಸೂಚಿಸಿದ್ದು, ಇದೊಂದು ಐತಿಹಾಸಿಕ ಘಟನೆ. ಯಾಕೆಂದರೆ ಈ ವರ್ಷ ಪುಣ್ಯಶ್ಲೋಕ ಅಹಲ್ಯಾ ದೇವಿಯ 300ನೇ ಜನ್ಮ ವರ್ಷಾಚರಣೆಯಾಗಿದೆ ಎಂದು ರಾಧಾಕೃಷ್ಣ ವಿಖೆ ಪಾಟೀಲ ಹೇಳಿದರು.
2022 ರಲ್ಲಿ, ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಹೆಸರನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ್ ಎಂದು ಬದಲಾಯಿಸಲಾಯಿತು. ನಗರಗಳಾದ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಗೆ ಕ್ರಮವಾಗಿ ಮೊಘಲ್ ಚಕ್ರವರ್ತಿಗಳಾದ ಔರಂಗಜೇಬ್ ಮತ್ತು ನಿಜಾಮ್ ಮೀರ್ ಓಸ್ಮಾನ್ ಅಲಿ ಖಾನ್ ಅವರ ಹೆಸರನ್ನು ಇಡಲಾಗಿತ್ತು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ