Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮೃದ್ಧ ಫೌಂಡೇಶನ್‌ನ ಅನಾಥಾಶ್ರಮಕ್ಕೆ ಪ್ರಯತ್ನ ಸಂಸ್ಥೆಯಿಂದ ನೆರವು

ಬೆಳಗಾವಿ: ಸಮಾಜಸೇವೆಯ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಯತ್ನ ಸಂಸ್ಥೆ ವತಿಯಿಂದ ಶನಿವಾರ ಬೆಳಗಾವಿ ತಾಲೂಕಿನ ಬಿ.ಕೆ. ಕಂಗ್ರಾಳಿ ಗ್ರಾಮದ ಸಮೃದ್ಧ ಫೌಂಡೇಶನ್ ಮಕ್ಕಳ ಅನಾಥಾಶ್ರಮಕ್ಕೆ ಭೇಟಿ ನೀಡಿ ವಿವಿಧ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅನಾಥಾಶ್ರಮದ ಮಕ್ಕಳಿಗೆ ಶಾಲಾ ಪುಸ್ತಕಗಳು, ನೋಟ್‌ಬುಕ್‌ಗಳು, ಲೇಖನ ಸಾಮಗ್ರಿಗಳು, ದಿನಸಿ ಸಾಮಗ್ರಿಗಳು, ಬಿಸ್ಕತ್ ಹಾಗೂ ವಿವಿಧ ತಿಂಡಿಗಳನ್ನು ವಿತರಿಸಿ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯಲಾಯಿತು.

ಶಾಲಾ ಪುಸ್ತಕಗಳನ್ನು ಉದಾರವಾಗಿ ಕೊಡುಗೆಯಾಗಿ ನೀಡಿದ ಸಂಸ್ಥೆಯ ಸದಸ್ಯೆ ಅರುಣಾ ಚೌಧರಿ ಅವರ ಸೇವಾ ಮನೋಭಾವವನ್ನು ಸಂಸ್ಥೆಯು ವಿಶೇಷವಾಗಿ ಶ್ಲಾಘಿಸಿತು. ಅವರ ಕೊಡುಗೆಯು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರ ಭವಿಷ್ಯದ ಕನಸುಗಳಿಗೆ ಹೊಸ ಚೈತನ್ಯ ತುಂಬಲಿದೆ ಎಂದು ಅಧ್ಯಕ್ಷೆ ಶಾಂತಾ ಆಚಾರ್ಯ ತಿಳಿಸಿದರು.
ಈ ಸೇವಾ ಕಾರ್ಯ ಯಶಸ್ವಿಯಾಗಲು ಸಹಕರಿಸಿದ ಸಂಸ್ಥೆಯ ಎಲ್ಲ ಸದಸ್ಯರು ಹಾಗೂ ಹಿತೈಷಿಗಳಿಗೆ ಪ್ರಯತ್ನ ಸಂಸ್ಥೆ ಕೃತಜ್ಞತೆ ಸಲ್ಲಿಸಿದೆ. ಸಮಾಜದ ಸಹಕಾರದಿಂದ ಇಂತಹ ಸೇವಾ ಚಟುವಟಿಕೆಗಳನ್ನು ಮುಂದುವರಿಸಿ, ಅಗತ್ಯವಿರುವ ಮಕ್ಕಳ ಬದುಕಿನಲ್ಲಿ ಸಂತೋಷ, ಆಶಾಭಾವನೆ ಮತ್ತು ಆತ್ಮವಿಶ್ವಾಸ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಪ್ರಯತ್ನ ಸಂಘಟನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!