Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಕ್ಕಮಹಾದೇವಿ ಮಹಿಳಾ ವಿವಿ: ನೂತನ ಕುಲಪತಿ ​

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 6ನೇ ಕುಲಪತಿಯಾಗಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ನೇಮಕ ಮಾಡಿ, ರಾಜ್ಯಪಾಲ ಥಾವರಚಂದ ಗೆಹಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಇಲ್ಲಿಯ ವರೆಗೆ ಹೊರಗಿನ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕುಲಪತಿಗಳಾಗಿ ನೇಮಕಗೊಂಡಿದ್ದರು. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪ್ರಾಧ್ಯಾಪಕರಿಗೆ ಕುಲಪತಿ ಹುದ್ದೆ ಒಲಿದು ಬಂದಿದೆ.

ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಗುರುವಾರ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು.

ಹಂಗಾಮಿ ಕುಲಪತಿಯಾಗಿದ್ದ ಪ್ರೊ.ನಾಮದೇವಗೌಡ, ಕುಲಸಚಿವ ಶಂಕರಗೌಡ ಸೋಮನಾಳ, ಸಿಂಡಿಕೇಟ್ ಸದಸ್ಯರಾದ ಶಿವಯೋಗಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ ಉಪಸ್ಥಿತರಿದ್ದರು.

 

ಪರಿಚಯ:
ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಕರಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಈ ಹಿಂದೆ ಮಹಿಳಾ ವಿವಿಯ ಹಣಕಾಸು ಅಧಿಕಾರಿಗಳಾಗಿ, ಸಮಾಜ ವಿಜ್ಞಾನ ನಿಕಾಯದ ಡೀನ್‌ ಆಗಿ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಪಿಎಂಇಬಿ ನಿರ್ದೇಶಕರಾಗಿ, ಸಿಡಿಸಿ ನಿರ್ದೇಶಕರಾಗಿ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

ಪ್ರೊ.ವಿಜಯಾ ಕೋರಿಶೆಟ್ಟಿ ಅವರು 50ಕ್ಕೂ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಏಳು ಪುಸ್ತಕಗಳು ಮತ್ತು 55 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇಲ್ಲಿಯ ವರೆಗೆ 16 ವಿದ್ಯಾರ್ಥಿನಿಯರು ಇವರ ಮಾರ್ಗದರ್ಶನದಲ್ಲಿ ಪಿಎಚ್‍.ಡಿ ಪದವಿ ಪಡೆದುಕೊಂಡಿದ್ದಾರೆ. ನಾಲ್ಕು ಸಂಶೋಧನಾ ಪ್ರೊಜೆಕ್ಟ್‌ಗಳನ್ನು ಪೂರ್ಣಗೊಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ