Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಕ್ಷಯ ತೃತೀಯ | ಚಿನ್ನದ ಬೆಲೆ ಏರಿಕೆ; 10 ಗ್ರಾಂಗೆ ಎಷ್ಟು ಗೊತ್ತೇ ?

ನವದೆಹಲಿ: ಅಕ್ಷಯ ತೃತೀಯ ಹಬ್ಬದ ಬೆನ್ನಲ್ಲೇ ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನದ ಧಾರಣೆಯು ಏರಿಕೆ ಕಂಡಿದೆ.

10 ಗ್ರಾಂ ಚಿನ್ನದ (ಶೇ 99.9 ಪರಿಶುದ್ಧತೆ) ಬೆಲೆಯು ₹1,050 ಹೆಚ್ಚಳವಾಗಿದ್ದು, ₹99,450 ಆಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ದರವು ₹1,100 ಹೆಚ್ಚಳವಾಗಿದ್ದು, ₹99 ಸಾವಿರ ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್‌ ತಿಳಿಸಿದೆ.

ಕಳೆದ ವರ್ಷದ ಡಿಸೆಂಬರ್ 31 ರಂದು10 ಗ್ರಾಂ ಚಿನ್ನದ ಬೆಲೆಯು ₹78,950 ಇತ್ತು. ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ 10 ಗ್ರಾಂಗೆ ₹20,500 ಏರಿಕೆಯಾಗಿದೆ.

ಬೆಳ್ಳಿ ಧಾರಣೆಯು ಹೆಚ್ಚಳವಾಗಿದೆ. ಪ್ರತಿ ಕೆ.ಜಿಗೆ ₹3,500 ಏರಿಕೆಯಾಗಿದ್ದು, ₹1.02 ಲಕ್ಷ ಆಗಿದೆ.

'ಬುಧವಾರ ಅಕ್ಷಯ ತೃತೀಯ ಹಬ್ಬವಿದೆ. ಇದರಿಂದ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಬೇಡಿಕೆ ಹೆಚ್ಚಳವಾಗಿದೆ. ಹಾಗಾಗಿ, ಹಳದಿ ಲೋಹದ ಬೆಲೆಯು ಏರಿಕೆಯಾಗಿದೆ' ಎಂದು ಚಿನಿವಾರ ಪೇಟೆ ತಜ್ಞರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ