Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮುಖ್ಯಮಂತ್ರಿಯವರ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ: ನೋಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ

ಬೆಂಗಳೂರು : ಫೆ.8 ರಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

*ಇಲಾಖಾವಾರು ಕೌಂಟರ್ ಗಳು*
ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ , ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ - ಸಿಬ್ಬಂದಿಗಳ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರು / ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

*ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ*

ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರಿಗಾಗಿ Battery ಚಾಲಿತ buggy/Wheel Chairs ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

*ಊಟದ ವ್ಯವಸ್ಥೆ*

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

*ಶೌಚಾಲಯ ವ್ಯವಸ್ಥೆ*

ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

*ಸಾರಿಗೆ ವ್ಯವಸ್ಥೆ*

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
.
*3738 ಅರ್ಜಿ ವಿಲೇವಾರಿ*
ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು