ಬೆಂಗಳೂರು: ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಭಾನುವಾರ (ಜುಲೈ 12) ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ತಿಳಿಸಿದೆ.
ಸಾರ್ವಜನಿಕ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.