Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಕ್ಸಲ್ ವಿಕ್ರಂಗೌಡ ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ ಪಲ್ಟಿ

ಉಡುಪಿ : ನಕ್ಸಲ್ ನಿಗ್ರಹ ಗುಂಡಿಗೆ ಬಲಿಯಾಗಿರುವ ನಕ್ಸಲ್ ಮುಖಂಡ ವಿಕ್ರಂ ಗೌಡನ ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿಯಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಆತನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ನಂತರ ಗ್ರಾಮಕ್ಕೆ ತೆಗೆದುಕೊಂಡು ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 169 Aಯಲ್ಲಿ ಆಂಬುಲೆನ್ಸ್ ಪಲ್ಟಿಯಾಯಿತು. ಹೀಗಾಗಿ ಆತನ ಮೃತ ದೇಹವನ್ನು ಬೇರೆ ವಾಹನದಲ್ಲಿ ತೆಗೆದುಕೊಂಡು ಹೆಬ್ರಿ ಬಳಿಯ ಕೂಡ್ಲು ಗ್ರಾಮಕ್ಕೆ ಕುಟುಂಬಸ್ಥರು ತೆರಳಿದರು.

ನಕ್ಸಲ್ ನಿಗ್ರಹ ದಳ ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ ವಿಕ್ರಂ ಗೌಡನ ಅಂತ್ಯಸಂಸ್ಕಾರವನ್ನು ಆತನ ಹುಟ್ಟೂರು ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನೆರವೇರಿಸಲು ಸಿದ್ಧತೆ ನಡೆದಿದೆ.

ವಿಕ್ರಂ ಗೌಡನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳವಾರ ತಡರಾತ್ರಿ ನಡೆದಿದೆ.

ಮೃತದೇಹವನ್ನು ಸ್ವೀಕರಿಸಲು ವಿಕ್ರಂ ತಂಗಿ ಮತ್ತು ತಮ್ಮ ಮಣಿಪಾಲದ ಆಸ್ಪತ್ರೆಗೆ ತಲುಪಿದ್ದಾರೆ.

'ಕೂಡ್ಲು ಸಮೀಪ ವಿಕ್ರಂಗೆ ಒಂದು ಎಕರೆ ಜಾಗವಿದ್ದು, ಆಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಂನ ತಮ್ಮ ಸುರೇಶ ಗೌಡ ಹಾಗೂ ತಂಗಿ ಸುಗುಣ ತಿಳಿಸಿದ್ದಾರೆ.

ರಸ್ತೆಗೆ ಅಡ್ಡ ಬಂದ ದನ :

ಹೆಬ್ರಿಯ ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆಂಬುಲೆನ್ಸ್ ರಸ್ತೆಬದಿಗೆ ವಾಲಿದೆ. ಅತಿ ವೇಗದಿಂದ ಸಂಚರಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಬದಿಗೆ ವಾಲಿದ್ದು, ಅದರಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಬಳಿಕ ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
ಆಂಬುಲೆನ್ಸ್‌ ವೇಗವಾಗಿ ಸಂಚರಿಸುತ್ತಿದ್ದಾಗ ದಿಢೀರನೆ ದನ ರಸ್ತೆಗೆ ಅಡ್ಡ ಬಂದಿದೆ, ಇದರಿಂದಾಗಿ ಆಂಬುಲೆನ್ಸ್ ರಸ್ತೆ ಬದಿಗೆ ಸರಿದಿದೆ. ಯಾರಿಗೂ ಗಾಯಗಳಾಗಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ಕೆ. ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ