Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆತ್ಮಹತ್ಯೆ ಪ್ರಕರಣ : ಸಂಚಲನಕ್ಕೆ ಕಾರಣವಾಯ್ತು ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಸೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಇದೀಗ ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ.

ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಪತ್ರದ ಪ್ರತಿಗಳನ್ನು ರಾಜ್ಯಪಾಲರು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಬೆಳಗಾವಿಯ ಪೊಲೀಸ್ ಆಯುಕ್ತರು ಸೇರಿ ಹಲವು ಪ್ರಮುಖರಿಗೆ ಪೋಸ್ಟ್ ಮಾಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳಾದ ತಹಸೀಲ್ದಾರ್ ಬಸವರಾಜ ನಾಗರಾಳ, ಎಫ್ ಡಿಎ ಅಶೋಕ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಸಹಾಯಕ ಸೋಮು ದೊಡವಾಡಿ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ ಈ ಪತ್ರ ಬಂದಿದೆ.

ರುದ್ರಣ್ಣನದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದು ಕೊಲೆ. ತಹಸೀಲ್ದಾರರ ಜೀಪ್ ಚಾಲಕ ಯಲ್ಲಪ್ಪ ಬಡಸದ ಎಂಬಾತನೇ ಕೊಲೆಯ ಸೂತ್ರಧಾರ. ಆ ವಾಹನ ತಪಾಸಿದರೆ ಮತ್ತು ಯಲ್ಲಪ್ಪನ ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಬರುತ್ತದೆ. ಯಲ್ಲಪ್ಪನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲಾ ದುಡ್ಡು ಹೊಡೆದಿದ್ದಾಳೆ. ಮೃತ ಪಟ್ಟವರಿಗೆ ನ್ಯಾಯ ಸಿಗಬೇಕು. ಪ್ರಕರಣ ಮುಚ್ಚಿ ಹಾಕಬಾರದು ಎಂದು ಪತ್ರದಲ್ಲಿ ಬರೆದಿರುವುದು ಗೊತ್ತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನಿಂಗ್ ಅವರು ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಅನಾಮಧೇಯ ಪತ್ರದ ಬಗ್ಗೆ ಪರಿಶೀಲನೆ ನಡೆಸಿ ಎಲ್ಲಾ ಆಯಾಮಗಳನ್ನು ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ