Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಮ್ಮದೇ ಸರಕಾರದ ವಿರುದ್ಧ ಉಪವಾಸ : ಪಕ್ಷ ವಿರೋಧಿ ನಡೆ !

 

ದೆಹಲಿ:
ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿರುವ ಸಚಿನ್‌ ಪೈಲಟ್‌ ಅವರ ನಡೆ ಪಕ್ಷ ವಿರೋಧಿಯಾದದ್ದು ಎಂದು ರಾಜಸ್ಥಾನ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುಖಜಿಂದರ್‌ ಸಿಂಗ್‌ ರಾಂಧವಾ ಹೇಳಿದ್ದಾರೆ.
ಬಿಜೆಪಿ ನಾಯಕಿ ಹಾಗೂ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಮಾಡಲಾಗಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದರ ಪ್ರತಿಭಟನಾರ್ಥವಾಗಿ ಏಪ್ರಿಲ್‌ 11ರಂದು (ಮಂಗಳವಾರ) ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಚಿನ್‌ ಪೈಲಟ್‌ ಭಾನುವಾರ ಘೋಷಿಸಿದ್ದರು.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ರಾಂಧವಾ, ಸಚಿನ್‌ ಪೈಲಟ್‌ ಅವರು ಮಂಗಳವಾರ ನಡೆಸಲು ಉದ್ದೇಶಿಸಿರುವ ಉಪವಾಸ ಸತ್ಯಾಗ್ರಹ ಪಕ್ಷದ ಹಿತಾಸಕ್ತಿಗೆ ವಿರುದ್ಧವಾದದ್ದು ಹಾಗೂ ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ತಮ್ಮದೇ ಸರ್ಕಾರದ ಜೊತೆಗೆ ಏನಾದರೂ ಸಮಸ್ಯೆಗಳಿದ್ದರೆ, ಮಾಧ್ಯಮಗಳು ಅಥವಾ ಸಾರ್ವಜನಿಕವಾಗಿ ಮಾತನಾಡುವ ಬದಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದು ತಿಳಿಸಿದ್ದಾರೆ.

ನಾನು ಕಳೆದ 5 ತಿಂಗಳುಗಳಿಂದ ಎಐಸಿಸಿ ಉಸ್ತುವಾರಿಯಾಗಿದ್ದೇನೆ. ಪೈಲಟ್‌ ಎಂದೂ ಈ ವಿಚಾರದ (ನಿಷ್ಕ್ರಿಯತೆ) ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ. ನಾನು ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ಈಗಲೂ ಶಾಂತಿಯುತ ಮಾತುಕತೆಗೆ ಮನವಿ ಮಾಡುತ್ತಿದ್ದೇನೆ. ಅವರು (ಸಚಿನ್ ಪೈಲಟ್‌) ಕಾಂಗ್ರೆಸ್‌ಗೆ ವಿವಾದಾತೀತ ಆಸ್ತಿ ಎಂದೂ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರವು 2018 ರಲ್ಲಿ ಅಸ್ತಿತ್ವಕ್ಕೆ ಬಂದ ದಿನದಿಂದಲೇ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿ ಗೆಹಲೋತ್‌ ಹಾಗೂ ಪೈಲಟ್‌ ನಡುವೆ ಹಗ್ಗಜಗ್ಗಾಟ ನಡೆದಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾಗಬೇಕು ಎಂದು ಆಗ್ರಹಿಸಿ 2020 ರ ಜುಲೈನಲ್ಲಿ ಪೈಲಟ್‌ ಹಾಗೂ ಅವರ ಬೆಂಬಲಿಗ 18 ಶಾಸಕರು ಬಹಿರಂಗವಾಗಿಯೇ ಬಂಡಾಯವೆದ್ದಿದ್ದರು. ಇದು ರಾಜ್ಯದಲ್ಲಿ ಒಂದು ತಿಂಗಳು ಕಾಲ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಪೈಲಟ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಗೆಹಲೋತ್‌, ‘ನನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿ ಜೊತೆ ಸೇರಿ ಪೈಲಟ್‌ ಸಂಚು ರೂಪಿಸಿದ್ದಾರೆ ಎಂದು ಆಗ ಆರೋಪಿಸಿದ್ದರು. ನಂತರ, ಪೈಲಟ್‌ ಎತ್ತಿರುವ ವಿಷಯಗಳ ಕುರಿತು ಪರಿಶೀಲನೆ ನಡಸುವುದಾಗಿ ಪಕ್ಷದ ಹೈಕಮಾಂಡ್‌ ಭರವಸೆ ನೀಡಿದ ನಂತರ, ಬಂಡಾಯ ಶಮನವಾಗಿತ್ತು.

ಭಾರತ್‌ ಜೋಡೊ ಯಾತ್ರೆ ರಾಜಸ್ಥಾನ ಪ್ರವೇಶಿಸುವ ಕೆಲ ದಿನಗಳ ಮುಂಚೆಯೂ ಪೈಲಟ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಗೆಹಲೋತ್‌, ಅವರನ್ನು ನಂಬಿಕೆ ದ್ರೋಹಿ ಎಂದು ಜರಿದಿದ್ದರು.

ಅವರು (ಗೆಹಲೋತ್‌) ಬಳಸಿದಂತಹ ಭಾಷೆ ಬಳಸುವುದು ನನ್ನ ಸಂಸ್ಕಾರವಲ್ಲ ಎಂದು ಪೈಲಟ್‌ ತಿರುಗೇಟು ನೀಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ