Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.
ಖಾತೆ ಹಂಚಿಕೆಯಾದ ಮರುದಿನ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ, “ನಾನು ಯಾರ ಮೇಲೂ ಕೋಪಗೊಂಡಿಲ್ಲ. ಆದರೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಸಹೋದ್ಯೋಗಿಯೊಬ್ಬರ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಡುತ್ತಿದ್ದೇನೆ” ಎಂದು ಪ್ರಕಟಿಸಿದರು.

ಆದರೆ, ತಾವು ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, “ನಾನು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯಲಿದ್ದೇನೆ. ಶಾಸಕನಾಗಿ ಸದನದಲ್ಲಿ ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತೇನೆ” ಎಂದು ತಿಳಿಸಿದರು.
ಬೆಂಗಳೂರು ನಗರಾಭಿವೃದ್ಧಿ ಖಾತೆಯ ಭರವಸೆ ಕೈತಪ್ಪಿದ್ದೇ ಅಸಮಾಧಾನಕ್ಕೆ ಕಾರಣ:
ತಮ್ಮ ರಾಜೀನಾಮೆಗೆ ಪ್ರಮುಖ ಕಾರಣವನ್ನು ಬಹಿರಂಗಪಡಿಸಿದ ರಾಮಲಿಂಗಾರೆಡ್ಡಿ, “ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲೇ ನನಗೆ ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆ ಸಮಯದಲ್ಲಿ ನನಗೆ ಸಚಿವ ಸ್ಥಾನವೇ ಬೇಡ ಎಂದು ನಾನು ಹೇಳಿದ್ದೆ. ಆದರೆ ಡಿ.ಕೆ. ಶಿವಕುಮಾರ ಅವರು ಖುದ್ದಾಗಿ ತಾವು ಮುಖ್ಯಮಂತ್ರಿಯಾದಾಗ ಖಂಡಿತವಾಗಿಯೂ ಈ ಇಲಾಖೆಯನ್ನು ತಮಗೇ ನೀಡುವುದಾಗಿ ಮಾತು ಕೊಟ್ಟಿದ್ದರು,” ಎಂದು ನೆನಪಿಸಿಕೊಂಡರು.

ಬೆಂಗಳೂರು ನಗರಾಭಿವೃದ್ಧಿ ಖಾತೆಯ ನಿರೀಕ್ಷೆಯಲ್ಲಿದ್ದ ತಮಗೆ ಈಗ ಬೇರೆ ಖಾತೆ ನೀಡಿರುವುದು ತೀವ್ರ ಬೇಸರ ತರಿಸಿದೆ ಎಂದು ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ನನಗೆ ಯಾರ ಮೇಲೆಯೂ ವೈಯಕ್ತಿಕವಾಗಿ ಕೋಪವಿಲ್ಲ. ಇದು ಕೇವಲ ಖಾತೆ ಹಂಚಿಕೆಗೆ ಸಂಬಂಧಿಸಿದ ನನ್ನ ವೈಯಕ್ತಿಕ ನಿರ್ಧಾರ” ಎಂದು ಹೇಳಿದ್ದಾರೆ.
ಹಿರಿಯ ನಾಯಕರ ಈ ದಿಢೀರ್ ರಾಜೀನಾಮೆ ನಿರ್ಧಾರದಿಂದಾಗಿ ರಾಜ್ಯ ರಾಜಕಾರಣದಲ್ಲಿ ಹಾಗೂ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನ