ಖಾನಾಪುರ : ಅವರೊಳ್ಳಿ ಗ್ರಾಮದ ಗ್ರಾಮದೇವತೆ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಶಾಸಕ ವಿಠ್ಠಲ ಹಲಗೇಕರ ಅವರ ಅನುದಾನದಲ್ಲಿ ₹10 ಲಕ್ಷ ರೂಪಾಯಿ ಮಂಜೂರಾಗಿದ್ದು, ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಪ್ರಮುಖರಾದ ಪ್ರಮೋದ ಕೋಚೇರಿ, ಬಸವರಾಜ ಸಾಣಿಕೊಪ್ಪ, ಯಶವಂತ ಕೊಡೊಳ್ಳಿ, ಸಹದೇವ ಬಡಗೇರ ಗ್ರಾಮದ ಹಿರಿಯರು, ಯುವಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
