Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ರಾಜ್ಯದಲ್ಲಿ ‘ಡೆಂಗೆ’ ಹೆಚ್ಚಳ ; ಎಲ್ಲ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಡೆಂಗೆ ಭೀತಿ ಹೆಚ್ಚಳವಾಗಿರುವ ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ರಾಜ್ಯದಲ್ಲಿ ಪ್ರಸ್ತುತ ಡೆಂಗೆ, ಚಿಕೂನ್ ಗುನ್ಯ ಹಾಗೂ ಜಿಕಾ ಮುಂತಾದ ರೋಗಗಳು ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸೇರಿದಂತೆ ಸಮುದಾಯದ ಸಹಭಾಗಿತ್ವದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಈ ರೋಗಗಳ ಲಕ್ಷಣಗಳು ಕಂಡು ಬಂದಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳ ಕುರಿತು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ಹೊರಡಿಸಲಾಗಿದೆ.
ಈ ಕುರಿತು ಶಾಲಾ ವಿದ್ಯಾರ್ಥಿಗಳ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಿದೆ.
ಈ ಕೆಳಗಿನ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲಾಗಿದೆ.

1) ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಮತ್ತು ಇಲ್ಲಿನ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಘನ ತ್ಯಾಜ್ಯ ವಸ್ತುಗಳ ಹತ್ತಿರ ಶಾಲಾ ವಿದ್ಯಾರ್ಥಿಗಳು ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಇವುಗಳನ್ನು ತೆರವುಗೊಳಿಸಿ ವಿಲೇವಾರಿ ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕು.

2) ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಹಾಗೂ ಸ್ಥಳೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ಹಾಗೂ ತ್ಯಾಜ್ಯ ಸಂಗ್ರಹಗಳನ್ನು ತೆರವುಗೊಳಿಸಲು ಮತ್ತು ಶಾಲಾ ಪರಿಸರಕ್ಕೆ ಸಾಂಕ್ರಾಮಿಕ ರೋಗ ನಿರೋಧಕ ದ್ರಾವಣಗಳನ್ನು ಕಾಲ-ಕಾಲಕ್ಕೆ ಸಿಂಪಡಿಸಲು ನಿಯಮಾನುಸಾರ ಅಗತ್ಯ ಕ್ರಮವಹಿಸಬೇಕು.
3) ಶಾಲೆಗಳಲ್ಲಿನ ನೀರಿನ ಸಂಗ್ರಾಹಕಗಳನ್ನು (ತೊಟ್ಟಿ, ಬ್ಯಾರೆಲ್ ಇತ್ಯಾದಿ)ಗಳನ್ನು ವಾರಕ್ಕೊಮ್ಮೆ ಉಜ್ಜಿ, ತೊಳೆದು, ಖಾಲಿ ಮಾಡಿ. ಒಣಗಿಸಿ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳದಿಂದ ಮುಚ್ಚಬೇಕು.
4) ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಡೆಂಗೆ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಸ್ಥಳೀಯ ಆರೋಗ್ಯ ಸಿಬ್ಬಂದಿ / ಶಾಲಾ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಬೇಕು.

5) ಈ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ನಿಯಂತ್ರಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಮುದಾಯದ ಸಹಭಾಗಿತ್ವ ಹಾಗೂ ಪಾತ್ರದ ಕುರಿತು ಶಾಲೆಗಳಲ್ಲಿ ಭಾಷಣ ಸ್ಪರ್ಧೆ, ರಸಪ್ರಶ್ನೆ ಹಾಗೂ ಕಿರುನಾಟಕಗಳು ಇತ್ಯಾದಿ ಪತ್ಯೇತರ ಚಟುವಟಿಕೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಶಾಲೆಗಳಲ್ಲಿನ ಸೈನ್ಸ್ ಕ್ಲಬ್ ಚಟುವಟಿಕೆಗಳ ಮೂಲಕ ಇಂತಹ ಈ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ, ಈ ಮಾಹಿತಿಯು ವಿದ್ಯಾರ್ಥಿಗಳ ಮೂಲಕ ಪೋಷಕರ ಮತ್ತು ಪಾಲಕರ ಸಮುದಾಯಕ್ಕೆ ತಲುಪಿಸುವಂತೆ ಸೂಚಿಸಬೇಕು.
6) ಒಂದೊಮ್ಮೆ ಶಾಲಾ ವಿದ್ಯಾರ್ಥಿಗಳಲ್ಲಿ ಇಂತಹ ಜ್ವರ ಪ್ರಕರಣಗಳು ವರದಿಯಾದಲ್ಲಿ ತಕ್ಷಣ ಅಂತಹ ವಿದ್ಯಾರ್ಥಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಮತ್ತು ಶುಶ್ರೂಷೆ ಮಾಡಿಸಲು ಅಗತ್ಯ ಕ್ರಮವಹಿಸಬೇಕು. ಒಂದು ವೇಳೆ ಶಾಲೆಗಳಲ್ಲಿ ಗುಂಪು ಜ್ವರ ಪ್ರಕರಣಗಳು ವರದಿಯಾದಲ್ಲಿ ಸ್ಥಳೀಯ, ತಾಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಬೇಕು. ಅಲ್ಲದೆ, ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರಕಲು ಮತ್ತು ಶುಶ್ರೂಷೆ ಮಾಡಿಸಲು ಅಗತ್ಯ ಕ್ರಮವಹಿಸಬೇಕು. ಇಂತಹ ಸಂದರ್ಭಗಳಲ್ಲಿ ಅನಾರೋಗ್ಯ ಪೀಡಿತ ವಿದ್ಯಾರ್ಥಿಯ ಸಂಪರ್ಕಕ್ಕೆ ಬೇರೆ ವಿದ್ಯಾರ್ಥಿಗಳು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು