Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎಎಸ್ಐ ಸಾವು

ಹುಬ್ಬಳ್ಳಿ: ಇಲ್ಲಿಯ ಹಳೆಕೋರ್ಟ್ ವೃತ್ತದ ಬಳಿ ನಡೆಯುತ್ತಿದ್ದ ಮೇಲು ಸೇತುವೆ ಕಾಮಗಾರಿ ಸಂದರ್ಭದಲ್ಲಿ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ ಗಾಯಗೊಂಡು ಕೆ ಎಂ ಸಿ-ಆರ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನಗರ ಠಾಣೆ ಎಎಸ್ಐ ನಾಭಿರಾಜ ದಯಣ್ಣವರ್ (59) ರವಿವಾರ ಮೃತಪಟ್ಟಿದ್ದಾರೆ. ಸತ್ತೂರು ರಾಜಾಜಿನಗರ ನಿವಾಸಿಯಾಗಿರುವ ಅವರು ಸೆಪ್ಟೆಂಬರ್ ಹತ್ತರಂದು ಕರ್ತವ್ಯಕ್ಕೆ ತೆರಳುತ್ತಿರುವ ವೇಳೆ ಕಬ್ಬಿಣದ ರಾಡ್ ತಲೆ ಮೇಲೆ ಬಿದ್ದಿತ್ತು. ಮೆದುಳಿಗೆ ದೊಡ್ಡ ಪ್ರಮಾಣದಲ್ಲಿ ಪೆಟ್ಟು ಬಿದ್ದು ಆಘಾತವಾಗಿದ್ದರಿಂದ ಅವರು ಪ್ರಜ್ಞಾಹೀನರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಅವಘಡಕ್ಕೆ ಸಂಬಂಧಿಸಿದ ಈಗ ಮೇಲು ಸೇತುವೆ ಗುತ್ತಿಗೆ ಪಡೆದ ಜಂಡು ಕಂಪನಿಯ ಮೂವರು ವ್ಯವಸ್ಥಾಪಕರು ಸೇರಿದಂತೆ 19 ಜನರ ವಿರುದ್ಧ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದುರಂತ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತ ಮಾಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ