Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ: ಭರ್ಜರಿ ಗೆಲುವಿನತ್ತ ಟಿಡಿಪಿ

Advertisement
ಅಮರಾವತಿ : ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತಗಳ ಎಣಿಕೆ ಪ್ರಗತಿಯಲ್ಲಿದೆ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಪ್ರಚಂಡ ವಿಜಯದತ್ತ ಸಾಗುತ್ತಿದೆ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕುಪ್ಪಂ ಕ್ಷೇತ್ರದಲ್ಲಿ 893 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರೆ, ಜೆಎಸ್‌ಪಿ ಮುಖ್ಯಸ್ಥ ಪವನ ಕಲ್ಯಾಣ ಪಿಠಾಪುರಂ ವಿಧಾನಸಭೆಯಿಂದ 7,997 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಒಟ್ಟು 175 ಸ್ಥಾನಗಳಲ್ಲಿ ಎನ್‌ಡಿಎ ೧೩೭ ಸ್ಥಾನಗಳಲ್ಲಿ ( ಟಿಡಿಪಿ 116 ಸ್ಥಾನಗಳಲ್ಲಿ, ಜನಸೇನಾ ಪಾರ್ಟಿ 15 ಹಾಗೂ ಬಿಜೆಪಿ 6) ಮುಂದಿದೆ. ಮುಖ್ಯಮಂತ್ರಿ ಜಗ್ನಮೋಹ ರೆಡ್ಡಿಯ ವೈಎಸ್‌ಆರ್‌ಸಿಪಿ ಪಕ್ಷವು 22 ಸ್ಥಾನಗಳಲ್ಲಿ ಮಾತ್ರ ಮುಂದಿದೆ.

ಆಂಧ್ರ ಪ್ರದೇಶ ವಿಧಾನಸಭೆಯು 175 ಸ್ಥಾನಗಳನ್ನು ಹೊಂದಿದೆ ಮತ್ತು ಬಹುಮತ ಪಡೆದು ಸರ್ಕಾರ ರಚಿಸಲು 88 ಸ್ಥಾನಗಳು ಬೇಕು.
2019 ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ 151 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾದರು. ಅಧಿಕಾರದಲ್ಲಿರುವ ಟಿಡಿಪಿ ಕೇವಲ 23 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಜೆಎಸ್‌ಪಿ ಒಂದೇ ಒಂದು ಸ್ಥಾನವನ್ನು ಗೆದ್ದಿತ್ತು, ಬಿಜೆಪಿ ಹಾಗೂ ಕಾಂಗ್ರೆಸ್ಸಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. 2014 ರ ಆಂಧ್ರಪ್ರದೇಶ ಚುನಾವಣೆಯಲ್ಲಿ, ಟಿಡಿಪಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು ಮತ್ತು ಒಟ್ಟಿಗೆ ಅವರು 106 ಸ್ಥಾನಗಳನ್ನು (ಟಿಡಿಪಿ 102 ಮತ್ತು ಬಿಜೆಪಿ 4) ಗೆದ್ದಿತ್ತು. ಮತ್ತು ವೈಎಸ್‌ಆರ್‌ಸಿಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ