Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

 

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ.
ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ ಇಂದು ಬಡಗೇರಿಯಲ್ಲಿ ನಡೆಯಲಿದೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದಲ್ಲಿ ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರು ಸಾರಾಯಿ ವಿರೋಧ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು.
ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಪಾಲ್ಗೊಂಡಿದ್ದರು. ಜಾನಪದ ಹಾಡುಗಾರಿಕೆ ಮೂಲಕ ಗಮನ ಸೆಳೆದಿದ್ದ ಸುಕ್ರಿ ಗೌಡ ಅವರಲ್ಲಿ ತಮ್ಮ ಎದುರಿನ ದೃಶ್ಯಗಳನ್ನು ನೋಡಿ ಅದಕ್ಕೆ ತಕ್ಕಂತೆ ಜಾನಪದ ಹಾಡು ಹೇಳುವ ವಿಶೇಷತೆ ಇತ್ತು. ಅವರ ಜಾನಪದ ಹಾಡುಗಾರಿಕೆಗೆ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಅವರು ಭಾಜನರಾಗಿದ್ದರು. ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ಮುಂದಾಗಿದ್ದರು.
ಅಂಕೋಲಾ ತಾಲೂಕಿನ ಪದ್ಮಶ್ರೀ ಪುರಸ್ಕೃತ ಹಾಲಕ್ಕಿ ಇಬ್ಬರು ಹಾಲಕ್ಕಿ ಮಹಿಳೆಯರಲ್ಲಿ ಮೊದಲಿಗರಾಗಿದ್ದ ಸುಕ್ರಿ ಗೌಡ ಅವರು ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೆಲವು ದಿನಗಳ ಹಿಂದೆ ಪದ್ಮಶ್ರೀ ಇನ್ನೋರ್ವ ಹಾಲಕ್ಕಿ ಮಹಿಳೆ ತುಳಸಿ ಗೌಡ ಅವರು ನಿಧನರಾಗಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸಂತಾಪ
ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮ ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿ, ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.
ಸಂಸದ ಕಾಗೇರಿ ಸಂತಾಪ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಗಾಯಕಿ ಹೋರಾಟಗಾರ್ತಿ ಸುಕ್ರಿ ಬೊಮ್ಮ ಗೌಡ ಅವರು ನಿಧನರಾದ ಸುದ್ದಿ ಕೇಳಿ ಅಘಾತವಾಯಿತು. ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು ಮತ್ತು ಮದ್ಯ ಮಾರಾಟ ಹಾವಳಿ ಹೆಚ್ಚಿದ್ದರಿಂದ ಅದನ್ನು ತಡೆಯಲು ಹಲವು ದಶಕಗಳ ಹಿಂದೆ ಸಾರಾಯಿ ವಿರೋಧಿ ಜನಾಂದೋಲನ ಸಹ ನಡೆಸಿದ್ದರು. ಭಾರತ ಸರ್ಕಾರದಿಂದ ಕೊಡಮಾಡುವ “ಪದ್ಮಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಸುಕ್ರಿ ಗೌಡ ಅವರ ಅಗಲುವಿಕೆಯಿಂದ ಜನಪದ ಸಂಸ್ಕೃತಿ ಸಂರಕ್ಷಕಿಯಾಗಿದ್ದ, ಅದಮ್ಯ ಚೇತನವನ್ನು ನಾಡು ಕಳೆದುಕೊಂಡಂತಾಗಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ಸೂಚಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ