Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಲೆಗಳಿಗೆ ದಸರಾ ರಜೆ ಘೋಷಣೆ

ಬೆಂಗಳೂರು : ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಮೊದಲು ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ರಾಜ್ಯದ ಕೆಲವು ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ. ವಿಶೇಷವಾಗಿ ಈ ವರ್ಷದ ಮಳೆಗಾಲದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಹೆಚ್ಚಿನ ಜಿಲ್ಲೆಗಳಿಗೆ ಮಳೆಯ ಬಿಸಿ ತಟ್ಟಿತ್ತು. ವಾರವಿಡೀ ಶಾಲೆಗಳಿಗೆ ರಜೆ ಸಾರಲಾಗಿತ್ತು. ಆದರೆ ಶನಿವಾರ ಸೇರಿದಂತೆ ಇತರ ರಜಾ ದಿನಗಳಲ್ಲಿ ಶಾಲೆಯನ್ನು ನಡೆಸಲಾಗಿತ್ತು. ಇದೀಗ ಶಾಲೆಗಳಿಗೆ ಮಧ್ಯಂತರ ದಸರಾ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಎಲ್ಲಾ ಶಾಲೆಗಳು 2024ರ ಶೈಕ್ಷಣಿಕ ವರ್ಷವು ಮೇ 29 ರಿಂದ ಪ್ರಾರಂಭವಾಗಿತ್ತು. ಮೊದಲ ಅವಧಿ ಅಕ್ಟೋಬ‌ರ್ 2ರ ತನಕ ಇರುತ್ತದೆ. ಸೆಪ್ಟೆಂಬರ್ 23 ರಿಂದ ಮಧ್ಯಂತರ ಪರೀಕ್ಷೆ ಆರಂಭವಾಗಿ ತಿಂಗಳ ಕೊನೆಯ ವರೆಗೆ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಶುರುವಾಗಲಿದೆ. ಅಕ್ಟೋಬರ್ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ರಜೆ ಇರಲಿದೆ.

ಅಕ್ಟೋಬ‌ರ್ 3ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿ ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿವೆ. 2024-2025 ರ ಶೈಕ್ಷಣಿಕ ವರ್ಷದ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ಘೋಷಣೆಯಾಗಿವೆ.

ಇದು ಜನಜೀವಾಳದ ಕಳಕಳಿ :

ಶಿಕ್ಷಕರು ದಸರಾ ರಜೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅದರಲ್ಲೂ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ರಜೆಯಲ್ಲಿ ಕಾರ್ಯ ಯೋಜನೆ ರೂಪಿಸಬೇಕು. ಈ ಮೂಲಕ ಮಕ್ಕಳ ಭವಿಷ್ಯ ಉತ್ತುಂಗಕ್ಕೇರಲು ತಮ್ಮ ತ್ಯಾಗ-ಕೊಡುಗೆಯನ್ನು ಧಾರೆ ಎರೆಯಬೇಕು. ವಿದ್ಯಾರ್ಥಿಗಳು ಸಹ ಮಧ್ಯಂತರ ದಸರಾ ರಜೆಯನ್ನು ಪಠ್ಯೇತರ ಚಟುವಟಿಕೆ ಜೊತೆ ಸಮಯ ಸಿಕ್ಕಾಗಲೆಲ್ಲ ಓದಿನಲ್ಲಿ ತೊಡಗಿಸಿ ಭವಿಷ್ಯದ ಸ್ಪರ್ಧಾತ್ಮಕ ಜೀವನವನ್ನು ಯಶಸ್ವಿಯಾಗಿಸಲು ಸಂಕಲ್ಪ ತೊಡಬೇಕು. ಈ ಮೂಲಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ದಸರಾ ರಜೆಯನ್ನು ಸಾರ್ಥಕಪಡಿಸಿಕೊಳ್ಳಬೇಕು ಎನ್ನುವುದು ಜನಜೀವಾಳದ ಕಳಕಳಿ ಹಾಗೂ ಆಶಯವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ