Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು : ಅಪಘಾತಕ್ಕೆ ನಾನೇ ಕಾರಣವೆಂದು ಮನನೊಂದು ಮತ್ತೊಬ್ಬ ಬೈಕ್‌ ಸವಾರ ಆತ್ಮಹತ್ಯೆ

 

ಮಡಿಕೇರಿ :
ಮಡಿಕೇರಿಯಲ್ಲಿ ಶುಕ್ರವಾರ ನಡೆದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಮೃತಪಟ್ಟ ನಂತರ ಈ ಅಪಘಾತಕ್ಕೆ ತಾನೇ ಕಾರಣ, ನನ್ನಿಂದಾಗಿ ಒಂದು ಜೀವ ಹೋಯಿತು ಎಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.

ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬೈಕ್‌ ಸವಾರನನ್ನು ಹೆರವನಾಡಿನ ತಮ್ಮಯ್ಯ (57) ಎಂದು ಗುರುತಿಸಲಾಗಿದೆ. ಮಡಿಕೇರಿಯ ಚೈನ್ ಗೇಟ್ ಬಳಿ ಶುಕ್ರವಾರ ಧನಲ್ ಸುಬ್ಬಯ್ಯ (24) ಹಾಗೂ ತಮ್ಮಯ್ಯ ಅವರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಧನಲ್ ಸುಬ್ಬಯ್ಯ ಗಂಭೀರವಾಗಿ ಗಾಯಗೊಂಡ ನಂತರ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಬೆಳಗಿನ ಮೃತಪಟ್ಟಿದ್ದ. ಮೃತ ಯುವಕ ಧನಲ್ ಸುಬ್ಬಯ್ಯ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಓದುತ್ತಿದ್ದ.
ಆತ ಮೃತಪಟ್ಟ ಮಾಹಿತಿ ಸಿಗುತ್ತಿದ್ದಂತೆ ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದು, ಭಾನುವಾರ ಮುಂಜಾನೆ ಸುಮಾರು 3 ಗಂಟೆಗೆ ಸುಮಾರಿಗೆ ಮೃತಪಟ್ಟಿದ್ದ. ಆದರೆ, ಅಪಘಾತದ ಘಟನೆಯಿಂದ ತೀವ್ರವಾಗಿ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟ ಸಹ ಮಾಡಿರಲಿಲ್ಲವಂತೆ. ನಂತರ ಅವರು ಸೋಮವಾರ ಬೆಳಗಿನ ಜಾವ ನೇಣಿಗೆ ಶರಣಾಗಿದ್ದಾರೆ ಎಂದು ವರದಿ ತಿಳಿಸಿದೆ. ಅಪಘಾತದ ಬಗ್ಗೆ ಮಡಿಕೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು