Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೊಂದು ಭವಿಷ್ಯ ನುಡಿದ ಕೋಡಿಶ್ರೀ

ಹುಬ್ಬಳ್ಳಿ: ಈ ವರ್ಷ ಒಟ್ಟು ಮೂರು ಗಣ್ಯರ ಸಾವು ಉಂಟಾಗಲಿದೆ. ಇಬ್ಬರು ರಾಷ್ಟ್ರಮಟ್ಟದ ನಾಯಕರು ಹಾಗೂ ಧಾರ್ಮಿಕರೊಬ್ಬರು ಮೃತಪಡುತ್ತಾರೆ ಎಂದು ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಕೋಡಿಮಠ ಸ್ವಾಮೀಜಿ, ರಾಷ್ಟ್ರ ಮಟ್ಟದ ಇಬ್ಬರು ನಾಯಕರಿಗೆ ಸಾವಿನ ಕಂಟಕ ಇದೆ. ಸನ್ಯಾಸಿಯೊಬ್ಬರ ಜೀವಕ್ಕೂ ಆಪತ್ತು ಎದುರಾಗಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆ ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಅಕಾಲಿಕ ಮಳೆ ಭಾರಿ ಪ್ರಮಾಣದಲ್ಲಿ ಆಗಲಿದೆ. ಇದರಿಂದ ಬೆಳೆ ಹಾನಿ ಆಗುವುದರ ಜತೆಗೆ ಜನರ ಜೀವಕ್ಕೂ ಆಪತ್ತು ಎದುರಾಗಲಿದೆ. ಬರಗಾಲದಿಂದ ಕಂಗೆಟ್ಟಿದ್ದ ರೈತರು, ನಾಗರಿಕರು ಮುಂದೆ ಪ್ರವಾಹಕ್ಕೆ ತುತ್ತಾಗುವ ಎಚ್ಚರಿಕೆ ನೀಡಿದ್ದಾರೆ.

ಅಣುಬಾಂಬ್‌ ಬೀಳಲಿದೆ. ವಿಶ್ವದಲ್ಲಿ ಯುದ್ಧ ಭೀತಿ ಎದುರಾಗಲಿದೆ. ಅಲ್ಲಿ ಅಣುಬಾಂಬ್‌ ಸ್ಫೋಟಕ್ಕೂ ಸಂಚು ಮಾಡಲಾಗುತ್ತದೆ. ಈ ವರ್ಷ ಜಾಗತಿಕವಾಗಿ ತುಂಬಾ ಅಪಾಯಕಾರಿಯಾಗಿದೆ. ಗೌರಿ ಶಂಕರ‌ ಶಿವಾ.. ಶಿವಾ.. ಎನ್ನುವ ರೀತಿ ಆಗಲಿದ್ದು, ಮನುಕುಲ ಸಂಕಷ್ಟಕ್ಕೆ ಸಿಲುಕಲಿದೆ. ಮುಂಬರಲಿರುವ ದಿನಗಳು ಕಷ್ಟಕರವಾಗಿವೆ ಎಂದು ಹೇಳಿದ್ದಾರೆ.

ಈ ವರ್ಷ ಸಾಕಷ್ಟು ತೊಂದರೆ
2024 ರ ವರ್ಷ ಬಹಳ ತೊಂದರೆಯಿಂದ ಕೂಡಿರಲಿದೆ. ಕಾಲಕ್ಕೆ ಮಳೆ ಬೆಳೆ ಬರಲ್ಲ. ಅಕಾಲಿಕ ಮಳೆ ಬೆಳೆ ಬರುತ್ತದೆ. ಇದರಿಂದ ಜನರಿಗೆ ತೊಂದರೆ ಆಗಲಿದೆ. ಇದರ ಜತೆಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಮಾಣದ ಅನಾಹುತ ಆಗುತ್ತವೆ. ವಿದೇಶದಲ್ಲಿ ಆಗುವ ಅನಾಹುತ ನಮ್ಮ ದೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

ಯುಗಾದಿ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವು ಏರುಪೇರಾಗಲಿದೆ. ಆ ಬಗ್ಗೆ ಮಾತನಾಡಲು ಆಗಲ್ಲ. ಯುಗಾದಿ ಬಳಿಕ ನಾನು ಅಧ್ಯಯನ ಮಾಡಿ ತಿಳಿಸಬಹುದು. ಆಂತರಿಕ ಮಾಲಿನ್ಯ ಹೆಚ್ಚಾಗಲಿದೆ
ನಾಡಿನಲ್ಲಿ ಒಳ್ಳೆಯ ಆಹಾರ ಗಾಳಿ, ವಾತಾವರಣ ಇಲ್ಲದಾಗಿದೆ. ಮನುಷ್ಯನ ಆರೋಗ್ಯ, ಆಯುಷ್ಯ ಕಡಿಮೆ ಆಗುತ್ತಿದೆ. ಇತ್ತ ಪರಿಸರ‌ ಮಾಲಿನ್ಯ ಹೆಚ್ಚಾಗುತ್ತಿದೆ. ಇನ್ನು ಮನುಷ್ಯನಲ್ಲಿ ಆಂತರಿಕ ನೆಮ್ಮದಿ ಇಲ್ಲದಂತಾಗಿದೆ. ಹಲವು ದುಶ್ಚಟಕ್ಕೆ ಬಲಿಯಾಗುತ್ತಿದ್ದಾನೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ