Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮತ್ತೊಂದು ರೈಲ್ವೆ ಮೇಲ್ಸೇತುವೆ ಬಂದ್ : ನಾಗರಿಕರಿಗೆ ಮಹತ್ವದ ಸೂಚನೆ ನೀಡಿದ ಪೊಲೀಸರು

ಬೆಳಗಾವಿ: ನಗರದ ಅನಗೋಳದಲ್ಲಿರುವ 4ನೇ ರೈಲ್ವೇ ಅಂಡರ್ ಬ್ರಡ್ಜ್ ಕಾಮಗಾರಿಯನ್ನು ದಿನಾಂಕ:20.06.2025 ರಿಂದ 19.06.2026 ರವರೆಗೆ ಹಮ್ಮಿಕೊಳ್ಳಲಾಗಿದೆ. ಸುಮಾರು ಒಂದು ವರ್ಷ ಈ ಕಾಮಗಾರಿ ನಡೆಯುತ್ತದೆ. ಸದರಿ ಕಾಮಗಾರಿ ಮುಕ್ತಾಯದವರೆಗೆ ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆ ಕುರಿತು ಈ ಕೆಳಗೆ ನಮೂದಿಸಿದ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕಾರಣ ಸಾರ್ವಜನಿಕರು ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸಿ ಸಂಚರಿಸುವುದು.

1) ಅನಗೋಳದಿಂದ ಬೆಮ್ಕೊ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಅನಗೋಳದಿಂದ ಡಿ.ವಿ.ಎಸ್ ಚೌಕ್, ಹರಿಮಂದಿರ ರೋಡ್, ಅನಗೋಳ ನಾಕಾ, 3ನೇ ರೇಲ್ವೇ ಗೇಟ್ ಓವರ ಬ್ರಿಡ್ಜ ಮಾರ್ಗವಾಗಿ ಖಾನಾಪೂರ ರಸ್ತೆ ಸೇರಿ ಮುಂದೆ ಸಾಗುವುದು.

2) ಖಾನಾಪುರ ಕಡೆಯಿಂದ ಬೆಮ್ಕೊ ಸರ್ಕಲ್ ಮಾರ್ಗವಾಗಿ 4ನೇ ರೈಲ್ವೇ ಗೇಟ್ ಮೂಲಕ ಅನಗೋಳ ಕಡೆಗೆ ಸಂಚರಿಸುವ ಎಲ್ಲ ಮಾದರಿಯ ವಾಹನಗಳು ಬೆಮ್ಕೊ ಸರ್ಕಲ್ದಿಂದ 3ನೇ ರೈಲ್ವೆ ಗೇಟ್ ಓವರ ಬ್ರಿಡ್ಜ್, ಅನಗೋಳ ನಾಕಾ, ಹರಿಮಂದಿರ ರೋಡ್ ಮುಖಾಂತರ ಮುಂದೆ ಸಂಚರಿಸುವುದು.

ಈ ಮೇಲ್ಕಂಡ ಸಂಚಾರ ಬದಲಾವಣೆಗೆ ಸಾರ್ವಜನಿಕರು ಬೆಳಗಾವಿ ನಗರ ಪೊಲೀಸರೊಂದಿಗೆ ಸಹಕರಿಸಲು ಕೋರಲಾಗಿದೆ ಎಂದು ಪೊಲೀಸ್ ಆಯುಕ್ತರು,
ಬೆಳಗಾವಿ ನಗರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ