Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಗನವಾಡಿ ಮಕ್ಕಳಿಗೂ ಅಪಾರ್ ಐಡಿ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗನವಾಡಿ ಮಕ್ಕಳಿಗೂ ಅಪಾರ್ ಐಡಿ(ಆಟೋಮೆಟೆಡ್ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ) ಜಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.

ಅಂಗನವಾಡಿ ನಂತರ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ 12 ಸಂಖ್ಯೆಯ ಅಪಾರ್ ಐಡಿಯನ್ನು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ತರಲಾಗುತ್ತಿದೆ.

ಈ ಐಡಿಯಿಂದಾಗಿ ಅಂಗನವಾಡಿಗೆ ಸೇರುವ ಮಗು ಮುಂದಿನ ಶಿಕ್ಷಣಕ್ಕೆ ದೇಶದ ಯಾವುದೇ ಭಾಗದಲ್ಲಿ ಶಿಕ್ಷಣ ಸಂಸ್ಥೆಗೆ ಪ್ರವೇಶ ಪಡೆದುಕೊಳ್ಳಲು ಸಹಾಯಕವಾಗಲಿದೆ. ಮಕ್ಕಳ ಶಾಲಾ ವರ್ಗಾವಣೆ ಪತ್ರ ಪ್ರಕ್ರಿಯೆಯನ್ನು ಇದು ಸರಳಗೊಳಿಸುತ್ತದೆ. ಶೈಕ್ಷಣಿಕ ಪ್ರಗತಿ, ಹಿಂದಿನ ಕಲಿಕೆಯನ್ನು ಗುರುತಿಸಬಹುದಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಒನ್ ನೇಷನ್ ಒನ್ ಸ್ಪೂಡೆಂಟ್ ಐಡಿ ಯೋಜನೆಯಡಿ ಅಪಾರ್ ಐಡಿಯನ್ನು ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಜಾರಿಗೆ ತರಲಾಗುತ್ತಿದೆ. ಅಂಗನವಾಡಿಗೆ ಮಕ್ಕಳು ದಾಖಲಾಗುವ ವೇಳೆ ಪೋಷಕರ ವಿವರ, ಮೊಬೈಲ್ ಸಂಖ್ಯೆ, ಆಧಾ‌ರ್ ಸಂಖ್ಯೆ, ಜನನ ಪ್ರಮಾಣ ಪತ್ರವನ್ನು ಪೋಷಣ್ ಟ್ರ್ಯಾಕ‌ರ್ ನಲ್ಲಿ ಭರ್ತಿ ಮಾಡಿದರೆ ಅಪಾ‌ರ್ ಐಡಿ ಸಿಗಲಿದೆ. ಪ್ರತಿ ಮಗುವಿಗೂ ಕಾರ್ಡ್ ನೀಡಲಿದ್ದು, ಇದರಲ್ಲಿ ಮಗುವಿನ ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿಗಳು ಇರುತ್ತವೆ. ಮಕ್ಕಳ ಶೈಕ್ಷಣಿಕ ದಾಖಲಾತಿ ಸಂಗ್ರಹಿಸಲು ಅಪಾರ್ ಐಡಿಯಿಂದ ಅನುಕೂಲವಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ