Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅರಣ್ಯ ಇಲಾಖೆಯ 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

 

ಬೆಂಗಳೂರು :
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್‌ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರಣ್ಯ ಇಲಾಖೆ ವೆಬ್ ಸೈಟ್ https://aranya.gov.in ಅಥವಾ https://kfdrecruitment.in/ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗಳಿಗೆ ಡಿಸೆಂಬರ್ 1 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು : ಅರಣ್ಯ ರಕ್ಷಕರು (ಗಸ್ತು ಅರಣ್ಯ ಪಾಲಕರು)
ಒಟ್ಟು ಹುದ್ದೆಗಳ ಸಂಖ್ಯೆ : 540
ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ : https://kfdrecruitment.in/

ಶೈಕ್ಷಣಿಕ ಅರ್ಹತೆ : ಅಧಿಸೂಚನೆಯ ದಿನಾಂಕದೊಳಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಕೆ ವೇಳೆ ಆನ್‌ಲೈನ್‌ನಲ್ಲಿ ಅಂಕಪಟ್ಟಿಗಳ ಅಪ್‌ಲೋಡ್‌ ಮಾಡಬೇಕು.
ವಯೋಮಿತಿ: ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / CAT-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ : ಅರಣ್ಯ ರಕ್ಷಕ ಹುದ್ದೆಗಳಿಗೆ ವೇತನ ಶ್ರೇಣಿ 18,600 – 32,600 ರೂ. ವರೆಗೆ ನೀಡಲಾಗುತ್ತದೆ. ಅಲ್ಲದೇ ಪಿಂಚಣಿ ಸೌಲಭ್ಯ, ವಿಶೇಷ ಭತ್ಯೆಗಳನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸ್ವೀಕಾರ ಆರಂಭ ದಿನಾಂಕ : 01-12-2023
ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ: 30-12-2023
ಉದ್ಯೋಗ-ಪೂರ್ಣಾವಧಿ
ವೆಬ್‌ಸೈಟ್‌ ವಿಳಾಸ https://kfdrecruitment.in/
ಸ್ಥಳ : ಕರ್ನಾಟಕ ರಾಜ್ಯದಾದ್ಯಂತ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ