Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಾವತಿಸಿ ಬಸ್‌ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ ಮತ್ತು ರಿಯಾಯಿತಿ ದರದ ಬಸ್‌ಪಾಸ್‌ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಜೂನ್ 12ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.

ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್‌ಗಳ ಸಂಪೂರ್ಣ ಶುಲ್ಕವನ್ನು ಅರ್ಜಿ ಸಲ್ಲಿಸಿದ 7 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಲ್ಕ ಪಾವತಿಸಿ ಬಸ್‌ ಪಾಸ್‌ಗಳನ್ನು ಪಡೆದಿರುವ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗಾಗಿ ಸರ್ಕಾರದ ಸೇವಾಸಿಂಧು ಪೋರ್ಟಲ್‌ನ https: //sevasindhuservices.karnataka.gov.in /buspassservices ಸಂಖ್ಯೆ ಹಾಗೂ ಓಟಿಪಿ ನಮೂದಿಸಿ, ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಥಿಗಳು ಆಧಾರ್ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸಿರಬೇಕು ಹಾಗೂ ತಮ್ಮ ಅಥವಾ ಪೋಷಕರ ಬ್ಯಾಂಕ್‌ ಖಾತೆ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು. 7 ದಿನಗಳ ಒಳಗೆ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಎನ್‌ಇಎಫ್‌ಟಿ ಅಥವಾ ಆಟಿಟಿಜಿಎಸ್ ಮೂಲಕ ಪಾಸ್ ಮೊತ್ತ ಮರುಪಾವತಿಯಾಗುವುದು.

ಮರುಪಾವತಿಯಾಗಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಎಸ್‌ಎಂಎಸ್‌ ರವಾನಿಸಲಾಗುವುದು. ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್‌ಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?ವಿಮಲ್ ಎಲೈಚಿ ಜಾಹೀರಾತು : ಅಜಯ ದೇವಗನ್, ಶಾರುಖ್ ಖಾನ್, ಟೈಗರ್ ಶ್ರಾಫ್‌ಗೆ ಎಫ್‌ಡಿಎ ನೋಟಿಸ್