Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಂಗಳೂರು ದುರ್ಘಟನೆ ಹಿನ್ನೆಲೆಯಲ್ಲಿ ನೂತನ ಪೊಲೀಸ್ ಆಯುಕ್ತರ ನೇಮಕ

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್

ಕಮಿಷನ‌ರ್ ಆಗಿ ಸೀಮಂತ್ ಕುಮಾರ್ ಸಿಂಗ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ರಾತ್ರಿ ಆದೇಶ ಹೊರಡಿಸಿದೆ.

ಪೊಲೀಸ್‌ ಕಮಿಷನ್ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ.

ಸೀಮಂತ್ ಕುಮಾರ್ ಸಿಂಗ್ ಅವರು ಬಿಎಂಟಿಎಫ್ ಎಡಿಜಿಪಿ ಆಗಿದ್ದರು. 39ನೇ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ.

ಡಿಸಿಆರ್‌ಇ ಎಡಿಜಿಪಿ ಅರುಣ್ ಚಕ್ರವರ್ತಿ, ಸಂಸ್ಥೆ ಎಡಿಜಿಪಿ ಬಿಕೆ.ಸಿಂಗ್, ಗುಪ್ತದಳದ ಎಡಿಜಿಪಿ ಹಾಗೂ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಳರ್ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಹಾಗೂ ಸೀಮಂತ್ ಕುಮಾರ್ ಸಿಂಗ್ ಅವರ ಮಧ್ಯೆ ನಗರ ಪೊಲೀಸ್ ಕಮಿಷನರ್ ಹುದ್ದೆಗೆ ಪೈಪೋಟಿ ಇತ್ತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ದಯಾನಂದ ಅವರನ್ನು ಅಮಾನತು ಮಾಡಲಾಗಿದೆ. ಬಿ.ದಯಾನಂದ ಅವರು ನಗರ ಪೊಲೀಸ್ ಕಮಿಷನರ್ ಆಗಿ ಎರಡು ವರ್ಷ ಕೆಲಸ ಮಾಡಿದ್ದರು.

ಬೆಂಗಳೂರು ದುರ್ಘಟನೆ ಮುಖ್ಯಮಂತ್ರಿ ; ಮಹತ್ವದ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿ ನಡೆಸಿ ಬುಧವಾರ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕ್ರಿಕೆಟ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿದರು ಇದರ ಮುಖ್ಯಾಂಶಗಳು:

·ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

· ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

· ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

· ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

· ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.

· ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.

· ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.

 

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ