Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಕೆಲವೆಡೆ ವರುಣನ ಅರ್ಭಟ

Advertisement

ಬೆಂಗಳೂರು: ಕರ್ನಾಟಕದ ನಾನಾ ಭಾಗಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯಾದ ವರದಿಯಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ಭಾಗದಲ್ಲಿ ಅತಿ ಹೆಚ್ಚು ಎಂದರೆ 80.ಮಿ.ಮೀ ಮಳೆಯಾಗಿದೆ. ಉಡುಪಿ ನಗರದಲ್ಲಿ 70 ಮಿ.ಮೀ ಮಳೆ ಸುರಿದಿದೆ. ಕುಂದಾಪುರದಲ್ಲಿ 60 ಮಿ.ಮೀ, ಉತ್ತರ ಕನ್ನಡ ಜಿಲ್ಲೆಯ ಗೇರು ಸೊಪ್ಪ, ಗೋಕರ್ಣ, ಕಾರವಾರದಲ್ಲಿ 50 ಮಿ.ಮೀ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಕೋಟ, ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ 50 ಮಿ.ಮೀ, ಶಿವಮೊಗ್ಗ ಜಿಲ್ಲೆ ಆಗುಂಬೆ, ಮಂಗಳೂರು ನಗರದಲ್ಲಿ 40 ಮಿ.ಮೀ ಮಳೆಯಾಗಿದೆ.

ತುಮಕೂರು ಜಿಲ್ಲೆ ಚಿಕ್ಕನಹಳ್ಳಿ, ರಾಯಚೂರು ಜಿಲ್ಲೆ ದೇವದುರ್ಗ, ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ, ರಾಯಚೂರು, ಶಕ್ತಿನಗರದಲ್ಲಿ ತಲಾ 30 ಮಿ.ಮೀ ಮಳೆ ಸುರಿದಿದೆ.

ಬಳ್ಳಾರಿ, ದಕ್ಷಿಣ ಕನ್ನಡದ ಬೆಳ್ತಂಗಡಿ, ಹಾಸನ ಜಿಲ್ಲೆ ಚನ್ನರಾಯಪಟ್ಟಣ, ಬಳ್ಳಾರಿ ಜಿಲ್ಲೆ ಕುಡುತಿನಿ, ರಾಯಚೂರು ಜಿಲ್ಲೆ ಕುರ್ಡಿ, ಮಂಡ್ಯ ಜಿಲ್ಲೆ ಮಳವಳ್ಳಿ, ಚಿತ್ರದುರ್ಗ ಜಿಲ್ಲೆ ಪರಶುರಾಂಪುರ, ಯಾದಗಿರಿ ಜಿಲ್ಲೆ ಸೈದಾಪು, ಉಡುಪಿ ಜಿಲ್ಲೆ ಸಿದ್ದಾಪುರ, ದಕ್ಷಿಣ ಕನ್ನಡ
ಜಿಲ್ಲೆಯ ಸುಳ್ಯದಲ್ಲಿ 20 ಮಿ.ಮೀ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ರಾಯಚೂರು ಜಿಲ್ಲೆಯ ಗಟ್ಟೂರು, ಯಾದಗಿರಿ ಜಿಲ್ಲೆ ಗುರುಮಿಟ್ಕಲ್, ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟ, ಮಂಡ್ಯ ಜಿಲ್ಲೆ ಮದ್ದೂರು, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಉಪ್ಪಿನಂಗಡಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಕೊಡಗು ಜಿಲ್ಲೆಯ ಸೋಮವಾರಪೇಟೆ, ಚಿಕ್ಕಬಳ್ಳಾಪುರ ಜಿಲ್ಲೆಯ ತೊಂಡೇಭಾವಿಯಲ್ಲಿ ತಲಾ 10 ಮಿ.ಮೀ ಮಳೆಯಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST