Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ..!

 

ಮಂಗಳೂರು :
ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ.

ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸರಿಗೆ ರೈಲಿನಲ್ಲಿದ್ದ ಇಬ್ಬರು ಯುವಕರ ಬಗ್ಗೆ ಅನುಮಾನವಾಯಿತು. ನಂತರ ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದುದರ ಬಗ್ಗೆ ಬಾಯ್ಬಿಟ್ಟಿದ್ದಾರೆ.

ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ರೈಲಿನಲ್ಲಿ ರಾತ್ರಿ ಮಲಗಿರುತ್ತಿದ್ದ ವೃದ್ಧರು ಹಾಗೂ ಮಹಿಳಾ ಪ್ರಯಾಣಿಕರೇ ಇವರ ಗುರಿಯಾಗಿದ್ದರು. ಅವರು ಚಿನ್ನಾಭರಣಗಳನ್ನು ದೋಚಲು ಮೊದಲು ಯೋಜನೆ ರೂಪಿಸುತ್ತಿದ್ದರು. ನಂತರ ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾದಾಗ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದರಂತೆ. ಕೊಂಕಣ ರೈಲಿನಲ್ಲಿ ಪಾಲಕ್ಕಾಡ್, ತಿರುವನಂತಪುರಂ ಹಾಗೂ ಮಂಗಳೂರು – ಮುಂಬೈ ವರೆಗೂ ಇವರು ಕಳ್ಳತನ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.
ರೈಲು ಪ್ರಯಾಣಿಕರಿಂದ ಕದ್ದಿದ್ದ 125 ಗ್ರಾಂ ಚಿನ್ನಾಭರಣಗಳನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ