Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಕಿರುತೆರೆ ನಟಿಗೆ ಅಶ್ಲೀಲ ವೀಡಿಯೊ ಕಳುಹಿಸಿ ಕಿರುಕುಳ ; ಆರೋಪಿ ಬಂಧನ

ಬೆಂಗಳೂರು: ಕನ್ನಡ ಹಾಗೂ ತೆಲುಗು ಧಾರವಾಹಿಗಳಲ್ಲಿ ಕೆಲಸ ಮಾಡುವ 41 ವರ್ಷದ ನಟಿಯೊಬ್ಬರು ತಮಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಪದೇ ಪದೇ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸಿದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಆತ ಕಿರುಕುಳ ಮುಂದುವರೆಸಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.

ತೆಲುಗು ಮತ್ತು ಕನ್ನಡ ದೂರದರ್ಶನ ಧಾರಾವಾಹಿಗಳಲ್ಲಿ ಕೆಲಸ ಮಾಡುವ ನಟಿಗೆ ಮೂರು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ‘ನವೀಂಜ್’ ಎಂಬ ಬಳಕೆದಾರರಿಂದ ಫ್ರೆಂಡ್ ರಿಕ್ವೆಸ್ಟ್ ಬಂದ ನಂತರ ಈ ಭಯಾನಕ ಅನುಭವ ಪ್ರಾರಂಭವಾಯಿತು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ‘Naveenz’ ಎಂಬ ಬಳಕೆದಾರರಿಂದ ಫ್ರೆಂಡ್‌ ರಿಕ್ವೆಸ್ಟ್‌ ಬಂದಿತ್ತು. ನಟಿ ಅದನ್ನು ಸ್ವೀಕರಿಸದಿದ್ದರೂ, ಆ ವ್ಯಕ್ತಿ ಮೆಸೆಂಜರ್ ಮೂಲಕ ಪ್ರತಿದಿನವೂ ಅಸಭ್ಯ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದ.

ನಟಿ ಆ ಬಳಕೆದಾರನನ್ನು ಬ್ಲಾಕ್ ಮಾಡಿದ ನಂತರವೂ, ಆತ ಹಲವು ಹೊಸ ಖಾತೆಗಳನ್ನು ಸೃಷ್ಟಿಸಿಕೊಂಡು ಅಶ್ಲೀಲ ಮೆಸೇಜ್‌ ಕಳುಹಿಸುವುದನ್ನು ಮುಂದುವರಿಸಿದ್ದ. ಈತ ಬೇರೆ ಬೇರೆ ಐಡಿಗಳಿಂದ ಅಶ್ಲೀಲ ಸಂದೇಶಗಳು ಮತ್ತು ತನ್ನ ಖಾಸಗಿ ಅಂಗಗಳ ವೀಡಿಯೊಗಳನ್ನು ಕೂಡ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ.
ನವೆಂಬರ್ 1 ರಂದು, ನಟಿ ನಾಗರಭಾವಿಯ ನಂದನ್ ಪ್ಯಾಲೇಸ್ ಬಳಿ ಬೆಳಿಗ್ಗೆ 11:30 ರ ಸುಮಾರಿಗೆ ಆರೋಪಿಯನ್ನು ನೇರವಾಗಿ ಭೇಟಿಯಾಗಿ, ಈ ತರಹದ ವರ್ತನೆ ನಿಲ್ಲಿಸುವಂತೆ ಎಚ್ಚರಿಸಿದ್ದರು ಎಂದು ವರದಿಯಾಗಿದೆ. ಆದಾಗ್ಯೂ, ಶೀಘ್ರದಲ್ಲೇ ಕಿರುಕುಳ ಮತ್ತೆ ಆರಂಭವಾಯಿತು ಎಂದು ಆರೋಪಿಸಲಾಗಿದೆ. ನಂತರ ನಟಿ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ