Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ..!

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು.

ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು.

ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪ್ರಕಟಿಸಿ, ಚಾಲನೆ ನೀಡಿದರು.

ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.

ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು.

ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು.

ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ಅವರು ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೋರಲಿನಿಂದ ಬೆಂಬಲಿಸಿತು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ..!ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಜೂನ್ 3ಕ್ಕೆ: ಕಾಂಗ್ರೆಸ್ ಅಧಿಕೃತ ಘೋಷಣೆನಾಳೆ ಅಥವಾ ನಾಡಿದ್ದು ಸಿಎಂ ಆಗಿ ಶಿವಕುಮಾ‌ರ್ ಪ್ರಮಾಣ ? ದ್ವಾರಕನಾಥ್‌, ಅಜ್ಜಯ್ಯ ಮೂಲಕ ದಿನ ನಿಗದಿ ಸಚಿವರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಪ್ರಮಾಣವಚನನಾಳೆ ಅಥವಾ ನಾಡಿದ್ದು ಡಿಕೆಶಿ ಪ್ರಮಾಣವಚನ...ಇಂದೇ ಹೊಸ ಸಿಎಂ ಆಯ್ಕೆಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ ಬಹುತೇಕ ಖಚಿತಚಡಚಣ | ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಬರ್ಬರ ಹತ್ಯೆಡಿಕೆಶಿ ಸಿಎಂ : ನಿಜವಾಯ್ತು ಬೊಂಬೆ ಭವಿಷ್ಯ..!ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆಡಿಕೆ ಶಿವಕುಮಾರ ಉತ್ತರಾಧಿಕಾರಿ ಯಾರು? ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸತೀಶ ಜಾರಕಿಹೊಳಿ ಫ್ರಂಟ್‌ ರನ್ನರ್..?