Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಅಥಣಿ ಸಾಹುಕಾರ್ !

 


ಅಥಣಿಯಲ್ಲಿ ನಿನ್ನೆ 2‌ ಸಭೆಗಳು ಇದ್ದವು. ಆದ್ದರಿಂದ ನಾನು ಬೆಳಗಾವಿಗೆ ತಡವಾಗಿ ಬಂದೆ ಹೊರತು ಯಾವುದೇ ಭಿನ್ನಮತ ನಮ್ಮಲ್ಲಿ ಇಲ್ಲ. ಬೆಳಗಾವಿಗೆ ಬಂದವನೇ ಅರುಣ್ ಸಿಂಗ್ ಅವರನ್ನು ಭೇಟಿಯಾದೆ ಎಂದು ಅವರು ತುಸು ಖಾರವಾಗಿಯೇ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ತುಸು ಖಾರವಾಗಿಯೇ ಉತ್ತರ ನೀಡಿದರು.


ಬೆಳಗಾವಿ :
ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ.

ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ
ಲಕ್ಷ್ಮಣ ಸವದಿ ಅವರು ನಿಭಾಯಿಸಬೇಕಾಗಿರುವ ಮಹತ್ವದ ಪಾತ್ರಗಳ ಬಗ್ಗೆ ಅರುಣ್ ಸಿಂಗ್ ಅವರು ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ.
ಬಿಜೆಪಿಯಲ್ಲಿ ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರಂತೆ ಇದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆಗೆ ಹೋಗುತ್ತೇವೆ ಎಂದು ಲಕ್ಷ್ಮಣ ಸವದಿ ಅವರು ಇಂದು ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನಾವೆಲ್ಲ ಒಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದ ಅವರು, ಈಗಾಗಲೇ ನಾವು ಐದು ಕ್ಷೇತ್ರಗಳ ಆಯ್ಕೆ ಮಾಡಿ ಆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿದ್ದೇವೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ತೆಕ್ಕೆಯಲ್ಲಿರುವ ಮತ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ 5 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಮುಖ್ಯ ಗುರಿಯಾಗಿದೆ. ಒಬ್ಬಬ್ಬ ಕಾರ್ಯಕರ್ತರಿಗೆ ಇಪ್ಪತ್ತೈದು ಮತಗಳ ಜವಾಬ್ದಾರಿ ನೀಡಲಾಗಿದೆ. ಬೆಳಗಾವಿ ಗ್ರಾಮೀಣ, ಖಾನಾಪುರ, ಯಮಕನಮರಡಿ, ಚಿಕ್ಕೋಡಿ, ಬೈಲಹೊಂಗಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಅಹರ್ನಿಶಿ ಶ್ರಮಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತ ಮರುಕಳಿಸುವಂತಾಗಲು ಬೆಳಗಾವಿ ಜಿಲ್ಲೆಯ ಕೊಡುಗೆ ನೀಡಲಾಗುವುದು ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ