Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಥಣಿ ಸಾಹುಕಾರ್ ತಿರುಗೇಟು : ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿದವರೇ ಜೆಡಿಎಸ್‌ಗೆ ಸೇರುತ್ತಾರೆ..!


ಬೆಳಗಾವಿ: ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಇದೀಗ ಪರೋಕ್ಷವಾಗಿ ಗೋಕಾಕ ಕಾಂಗ್ರೆಸ್ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಸಿಡಿದೆದ್ದಿದ್ದಾರೆ. ಎಂದಿನಂತೆ ತಮ್ಮ ಹರಿತ ಮಾತಿನ ಮೂಲಕ ತಿವಿದಿದ್ದಾರೆ. ನಾನು ಬೇರೆ ಪಕ್ಷಕ್ಕೆ ಹೋಗುವುದಾಗಿ ಎಲ್ಲಿಯೂ ಹೇಳಿಲ್ಲ. ನಾನು ಬಿಜೆಪಿಗೆ ಸೇರುತ್ತೇನೆ ಎಂದು ಹೇಳುತ್ತಿದ್ದಾರೆಯೋ, ಮುಂದೆ ಬಿಜೆಪಿಯಲ್ಲಿ ಅವರೇ ಬಹಳ ದಿನ ಇರಲ್ಲ. ಜೆಡಿಎಸ್‌ ಗೆ ಸೇರುತ್ತಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳುವ ಮೂಲಕ ಪರೋಕ್ಷವಾಗಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ತಿರುಗೇಟು ಕೊಟ್ಟರು.



ಕೆಲವರು ದುರುದ್ದೇಶದ ಕಾರಣಕ್ಕೆ ಏನೇನೋ ವಿಷಯ ಚರ್ಚಿಸುತ್ತಿದ್ದಾರೆ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ. ಅವರೇ ಬೇರೆ ಪಕ್ಷಕ್ಕೆ ಹೋಗಲು ಚಿಂತನೆ ನಡೆಸಿದ್ದಾರೆ. ಹಾಗಾಗಿ ನನ್ನ ಬಗ್ಗೆ ಅನುಮಾನ ಏಕೆ. ತಲೆಬುಡ ಇಲ್ಲದೆ ಚರ್ಚಿಸುವವರು ಆಡುವ ಮಾತು ಮತ್ತು ಆರೋಪಗಳಿಗೆ ನಾನು ಕಿವಿಗೊಡುವುದಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಪಕ್ಷದ ವರಿಷ್ಠರು ಸಚಿವ ಸ್ಥಾನದ ಬಗ್ಗೆ ತೀರ್ಮಾನಿಸುತ್ತಾರೆ. ನಮ್ಮ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಕೆಲ ದಿನಗಳಲ್ಲೇ ಎಲ್ಲದಕ್ಕೂ ತೆರೆ ಬೀಳುತ್ತದೆ. ನನ್ನ ಕ್ಷೇತ್ರದಲ್ಲಿ ಸೋಮವಾರ ಅನೇಕ ಕಾರ್ಯಕ್ರಮ ಇವೆ. ಅವುಗಳಲ್ಲಿ ಭಾಗವಹಿಸಬೇಕಿರುವ ಕಾರಣ, ನಾನು ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು