Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಾಗೃತ ಕ್ಷೇತ್ರ : ಉತ್ತರ ಕರ್ನಾಟಕದಲ್ಲೇ ಅತ್ಯಂತ ಭವ್ಯ ಜಾತ್ರೆಗೆ ಸಜ್ಜಾದ ಸುಳೇಭಾವಿ 9 ದಿನಗಳ ವೈಭವದ ಜಾತ್ರೆ ; ಮಹಾಲಕ್ಷ್ಮೀ ದರ್ಶನ ಪಡೆಯಲು ಭಕ್ತರ ತವಕ

 

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ಮಾರ್ಚ್ 18 ರಿಂದ 26ರ ವರೆಗೆ ನಡೆಯಲಿದ್ದು, ಭವ್ಯ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಅಧ್ಯಕ್ಷ ದೇವಣ್ಣ ಬಂಗೇನ್ನವರ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿ ಐದು ವರ್ಷಕ್ಕೊಮ್ಮೆ ಅತ್ಯಂತ ಸಡಗರ ಸಂಭ್ರಮದಿಂದ ಜಾತ್ರಾ ಮಹೋತ್ಸವ ನಡೆಯಲಿದ್ದು, ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಹಾಗೂ ಪೂಜಾರಿಗಳ ಸಮ್ಮುದಲ್ಲಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ಭಕ್ತರ ಅನುಕೂಲಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ.

ಮಾರ್ಚ್ 18 ರಿಂದ 26ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಇಡೀ ಸುಳೇಭಾವಿ ಗ್ರಾಮ ಸಿದ್ಧಗೊಂಡಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. 9 ದಿನಗಳ ಕಾಲ ನಡೆಯುವ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಮಾರ್ಚ್ 18 ರಂದು ರಾತ್ರಿ 12 ಗಂಟೆ ಸುಮಾರಿಗೆ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿರುವ ಬಡಿಗೇರ ಮನೆಯಿಂದ ಶ್ರೀ ಮಹಾಲಕ್ಷ್ಮೀ ದೇವಿಯ ವೈಭವದ ಹೊನ್ನಾಟ ಆರಂಭಗೊಳ್ಳಲಿದೆ. ಸಂಪ್ರದಾಯದAತೆ ದೇವಿಯ ಉಡಿ ತುಂಬುವ ಕಾರ್ಯಕ್ರಮದೊಂದಿಗೆ ಹೊನ್ನಾಟ ಶುರುವಾಗಲಿದೆ. ಇಡೀ ರಾತ್ರಿ ಭಂಡಾರ ರಹಿತ ಹೊನ್ನಾಟ ನಡೆದು ಬುಧವಾರ ಮಾರ್ಚ್ 19ರಂದು ಸಂಜೆ 8 ಗಂಟೆವರೆಗೆ ನಿರಂತರವಾಗಿ ಹೊನ್ನಾಟ ನಡೆಯಲಿದೆ. ನಂತರ 8 ಗಂಟೆ ಸುಮಾರಿಗೆ ಗ್ರಾಮದ ದೇವಸ್ಥಾನದಲ್ಲಿ ದೇವಿಯ ಪ್ರತಿಷ್ಠಾಪನೆ ಆಗುವುದು. ಈ ವರ್ಷ ನಡುಮನೆ ಜಾತ್ರೆ ಇದ್ದು, ಹೀಗಾಗಿ ದೇವಿಯನ್ನು ಮಂದಿರದಲ್ಲಿಯೇ ಪ್ರತಿಷ್ಠಾಪಿಸಲಾಗುತ್ತದೆ. ಮಾರ್ಚ್ 21ರಂದು ಶುಕ್ರವಾರ ಧಾರ್ಮಿಕ ವಿಧಿ ವಿಧಾನಗಳಿಂದ ಸುಳೇಭಾವಿ ಗ್ರಾಮಸ್ಥರಿಂದ ಉರುಳು ಸೇವೆ(ದೀಡ್ ನಮಸ್ಕಾರ) ಮತ್ತು ಉಡಿ ತುಂಬುವ ಕಾರ್ಯಕ್ರಮ ಜರುಗಲಿದೆ. ಮಾ. 26ರಂದು ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ವಿವರಿಸಿದರು.

ನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ದೇವಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ನಿಲ್ಲಲು ಭಕ್ತರ ಅನುಕೂಲಕ್ಕಾಗಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಸರದಿ ಸಾಲಿನಲ್ಲಿ ನಿಲ್ಲಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. 9. ದಿನಗಳ‌ ಕಾಲ‌ ವಿವಿ‌ಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಟ್ರಸ್ಟ್ ಸದಸ್ಯ ಬಸನಗೌಡ ಹುಂಕರಿ ಪಾಟೀಲ ಮಾತನಾಡಿ, ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಈ ಜಾತ್ರೆ ಉತ್ತರ ಕರ್ನಾಟಕದಲ್ಲಿಯೇ ಅತ್ಯಂಡ ಭವ್ಯ ಜಾತ್ರೆ ಇದಾಗಿದೆ.ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶ್ರೀ ಮಹಾಲಕ್ಷ್ಮೀ ಭಕ್ತರ ಪಾಲಿನ ಕಾಮಧೇನು. ತಲೆತಲಾಂತರದಿಂದ ಜಾತ್ರಾ ಪದ್ಧತಿ ಸಂಪ್ರದಾಯದಿಂದ ನಡೆದುಕೊಂಡು ಬಂದಿದೆ. ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿಯೇ ನಾವು ನಡೆಯುತ್ತಿದ್ದೇವೆ ಎಂದು ಹೇಳಿದರು.



ಟ್ರಸ್ಟ್ ಸದಸ್ಯರಾದ ಶಶಿಕಾಂತ ಸಂಗೊಳ್ಳಿ, ಅಣ್ಣಪ್ಪಪಾಟೀಲ, ದ್ಯಾಮಣ್ಣ ಮುರಾರಿ, ಬಾಳಕೃಷ್ಣ ಬಡಕಿ, ಕಲ್ಲಪ್ಪ ಲೋಲಿ, ಲಗಮಪ್ಪ ಗುಡದಪ್ಪಗೋಳ, ಮಾರುತಿ ರವಳಗೌಡ, ಕಲ್ಲಪ್ಪ ರಾಗಿ, ಭೈರಣ್ಣ ಪರೋಜಿ, ಮುರುಗೇಶ ಹಂಪಿಹೊಳಿ, ಸಂಭಾಜಿ ಯಮೋಜಿ, ವಿಠ್ಠಲ ಚೌಗುಲೆ, ಮಲ್ಲಪ್ಪ ಯರಝರವಿ, ಲಕ್ಷ್ಮಣ ಮಂಡು, ಕೃಷ್ಣಾ ಕಲ್ಲೂರ, ಮಾರುತಿ ರವಳಗೌಡರ, ಅನಂತ ಕವಡಿ, ಪೂಜಾರಿಗಳಾದ ಭೀಮಶಿ ಪೂಜಾರಿ, ರಾಮ ಪೂಜಾರಿ, ಲಕ್ಷ್ಮಣ ಪೂಜೇರಿ, ಯಲ್ಲಪ್ಪ ದ್ಯಾಮರಾಯಿ, ಭೈರೋಬಾ ಕಾಂಬಳೆ ಇದ್ದರು.

-----

ಭಂಡಾರ ರಹಿತ ಜಾತ್ರೆಯಲ್ಲಿ ಹೊನ್ನಾಟವೇ ವಿಶೇಷ

ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಲಿದ್ದಾರೆ. ಭಂಡಾರ ರಹಿತ ಜಾತ್ರೆ ಇದಾಗಿದ್ದು, ಹೊನ್ನಾಟ ನೋಡುವುದೇ ಸೊಗಸು. ಇಂಥ ಭವ್ಯ ಹೊನ್ನಾಟವನ್ನು ಭಕ್ತರು ಕಣ್ತುಂಬಿಕೊಳ್ಳಬೇಕು. ಭಂಡಾರ ಇಲ್ಲದೇ ನಡೆಯುವ ಏಕೈಕ ಜಾತ್ರೆ ನಮ್ಮದು. ಈ ಮಾದರಿ ಜಾತ್ರೆಯನ್ನು ಇನ್ನುಳಿದ ಕಡೆಗಳಲ್ಲೂ ಅಳವಡಿಸಿಕೊಳ್ಳಲು ಟ್ರಸ್ಟ್ ಅಧ್ಯಕ್ಷ ದೇವಣ್ಣ ಬಂಗೇನ್ನವರ ಸಲಹೆ ನೀಡಿದರು.

---------

ಜಾತ್ರೆಯಲ್ಲಿ ಬ್ಯಾನರ್‌ಗೆ ನಿರ್ಬಂಧ

ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರೆ ವಿಶೇಷತೆ ಎಂದರೆ 9 ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಎಲ್ಲಿಯೂ ಬ್ಯಾನರ್‌ಗಳನ್ನು ಅಳವಡಿಸಲು ಅವಕಾಶ ಇಲ್ಲ. ಬ್ಯಾನರ್, ಬಂಟಿಂಗ್ಸ್, ಕಟೌಟ್‌ಗಳಿಂದ ಗ್ರಾಮದ ಸೌಂದರ್ಯ ಹಾಳಾಗಬಾರದು, ಯಾರೂ ಪ್ರತಿಷ್ಠೆ ತೋರಿಸಬಾರದು ಎಂಬ ಕಾರಣಕ್ಕೆ ಹಲವಾರು ವರ್ಷಗಳಿಂದ ಬ್ಯಾನರ್ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಡಿಜೆ-ಡಾಲ್ಬಿಗಳನ್ನು ಹಚ್ಚಲು ಅವಕಾಶ ಇರುವುದಿಲ್ಲ. ದೇಸಿ ವಾದ್ಯ ಮೇಳದೊಂದಿಗೆ ಜಾತ್ರೆ ನೆರವೇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವಿಯ ಹೊನ್ನಾಟದ ವೈಭವ ನೋಡಬೇಕು ಎಂದು ಟ್ರಸ್ಟ್ ಸದಸ್ಯ ಬಸನಗೌಡ ಹುಕರಿಪಾಟೀಲ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ