Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ: ಭಕ್ತರ ಸಂಭ್ರಮೋತ್ಸವದಲ್ಲಿ ಅಯೋಧ್ಯೆ

ಅಯೋಧ್ಯೆ: ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವರ್ಷ ತುಂಬಿದ್ದರಿಂದ ಅಯೋಧ್ಯೆ ಶನಿವಾರ ಭಕ್ತಿ, ಸಂಭ್ರಮದಲ್ಲಿ ಮಿಂದೆದ್ದಿತು. ಭಕ್ತ ಸಾಗರದಲ್ಲಿ ಅಯೋಧ್ಯೆ ಮಿಂದೆದ್ದಿತು.

ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೇಶದ ವಿವಿಧ ಭಾಗಗಳಿಂದ ಭಕ್ತರು ಭಾರಿ ಸಂಖ್ಯೆಯಲ್ಲಿ ಅಯೋಧ್ಯೆಗೆ ಬಂದಿದ್ದಾರೆ.
ಯಜುರ್ವೇದ ಪಠಣದೊಂದಿಗೆ ವಾರ್ಷಿಕೋತ್ಸವ ಕಾರ್ಯಕ್ರಮಗಳಿಗೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಗರ್ಭಗೃಹವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಲ ರಾಮನ ಮೂರ್ತಿಗೆ ಅಭಿಷೇಕ ನೆರವೇರಿಸಿದರು. ನಂತರ ಬಾಲ ರಾಮನ ಮೂರ್ತಿಗೆ ಮಹಾ ಆರತಿ ಮಾಡಿ, 56 ಭಕ್ಷ್ಯಗಳ ನೈವೇದ್ಯ ಸಮರ್ಪಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಬಾಲ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.
ಹಲವು ಶತಮಾನಗಳ ತ್ಯಾಗ, ತಪಸ್ಸು ಹಾಗೂ ಹೋರಾಟದ ಫಲವಾಗಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ. ಈ ಮಂದಿರ ನಮ್ಮ ಸಂಸ್ಕೃತಿ ಮತ್ತು ಅಧ್ಯಾತ್ಮ ಪರಂಪರೆಯ ದ್ಯೋತಕವಾಗಿದೆ ಎಂದು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಕಸಿತ ಭಾರತ ನಿರ್ಮಾಣ ಮಾಡುವ ನಮ್ಮ ಸಂಕಲ್ಪ ಸಾಕಾರಗೊಳ್ಳುವುದಕ್ಕೆ ರಾಮ ಮಂದಿರವು ಸ್ಫೂರ್ತಿ ನೀಡಲಿದೆ ಎಂಬ ವಿಶ್ವಾಸ ಹೊಂದಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು