ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಜಯ ಸಾಧಿಸಿದ್ದಾರೆ.
ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ ಮತ ಎಣಿಕೆ ನಡೆಯಿತು.
ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 3,207 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಮೇಶ ಮೇಟಿ ಅವರಿಗೆ 6,106 ಮತಗಳು ಬಿದ್ದಿದ್ದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 2, 899 ಮತ ಗಳಿಸಿದ್ದಾರೆ.
