Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರಿ ಕಚೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಧೂಮಪಾನ ಹಾಗೂ ತಂಬಾಕಿನ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ(ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿ ರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸಬೇಕು. ಈ ಸೂಚನೆಗಳನ್ನು ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ನೌಕರರು ಧೂಮಪಾನ ಮಾಡುವುದು ಮತ್ತು ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್‌ ಮಸಾಲ, ಹೊಗೆಸೊಪ್ಪು,ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ