Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ

Advertisement

ಕಾರವಾರ: ನೈಋತ್ಯ ಮಾನ್ಸೂನ್‌ ಹಂಗಾಮಿನ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾದ್ಯಂತ 2026ರ ಜೂನ್ 1 ರಿಂದ ಆಗಸ್ಟ್ 31ರ ವರೆಗೆ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳು ಹಾಗೂ ನೀರು ಆಧರಿತ ಮನರಂಜನಾ ಚಟುವಟಿಕೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ.

ಮಳೆಗಾಲದ ಅವಧಿಯಲ್ಲಿ ಭಾರಿ ಮಳೆ, ನದಿಗಳಲ್ಲಿ ನೀರಿನ ಹರಿವು ದಿಢೀರ್ ಹೆಚ್ಚಳ, ಹಠಾತ್ ಪ್ರವಾಹ, ಜೋರಾದ ಸಮುದ್ರದ ಅಲೆಗಳು ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ಪ್ರಾಣಹಾನಿ ಸಂಭವಿಸುವ ಅಪಾಯವಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೇ 13 ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಯಾವುದೇ ರೀತಿಯ ಅನಾಹುತಗಳು ಹಾಗೂ ಪ್ರಾಣಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಯಾವೆಲ್ಲಾ ಚಟುವಟಿಕೆಗಳಿಗೆ ನಿಷೇಧ?
ನದಿಗಳು, ಜಲಾಶಯಗಳು, ಹಿನ್ನೀರು, ಅಳಿವೆಗಳು ಮತ್ತು ಇತರ ಒಳನಾಡು ಜಲಮೂಲಗಳಲ್ಲಿ ಬೋಟಿಂಗ್ (Boating) ಮಾಡುವುದು.
ಕರಾವಳಿ ಪ್ರದೇಶಗಳಲ್ಲಿ ನಡೆಯುವ ಸಮುದ್ರಾಧಾರಿತ ಪ್ರವಾಸೋದ್ಯಮ ಮತ್ತು ಮನರಂಜನಾ ಚಟುವಟಿಕೆಗಳು.
ಸ್ಕೂಬಾ ಡೈವಿಂಗ್ (Scuba Diving) ಮತ್ತು ಅದಕ್ಕೆ ಸಂಬಂಧಿಸಿದ ನೀರಿನೊಳಗಿನ ಚಟುವಟಿಕೆಗಳು.
ಜೆಟ್ ಸ್ಕೀಯಿಂಗ್, ಕಯಾಕಿಂಗ್, ಬನಾನಾ ರೈಡ್, ಪ್ಯಾರಾಸೈಲಿಂಗ್, ಸ್ಪೀಡ್ ಬೋಟ್ ರೈಡ್‌ನಂತಹ ಜಲ ಕ್ರೀಡೆಗಳು ಇವುಗಳನ್ನು ನಿಷೇಧಿಸಲಾಗಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಅಡಿಯಲ್ಲಿ ಮತ್ತು ಇತರ ಅನ್ವಯಿಕ ಕಾನೂನುಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ