Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾನಲ್ಲೆ ಮಧುಚಂದ್ರಕೆ ಸಿನಿಮಾ ನಟ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ

 

ಬೆಂಗಳೂರು: ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ (71) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

 

ನಗರದ ಎಚ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ʻಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ 10 ಸಿನೆಮಾದಲ್ಲಿ ನಟಿಸಿದ್ದಾರೆ.

ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ವಿಜಯಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ