Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು : 500 ವಿದ್ಯಾರ್ಥಿಗಳು, 21 ಸಿಬ್ಬಂದಿಗೆ ತೀವ್ರ ಜ್ವರ ; ಶಾಲೆ ಬಂದ್‌  

ಬೆಂಗಳೂರು: ಬೆಂಗಳೂರು ನಗರದ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಋತುಮಾನೀಯ ಜ್ವರದಂತಹ ಕಾಯಿಲೆಯ ತೀವ್ರ ಹಾವಳಿ ಕಾಣಿಸಿಕೊಂಡಿದ್ದು, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 21 ಸಿಬ್ಬಂದಿ ಜ್ವರ, ಶೀತ, ಕೆಮ್ಮು ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ ಎಂದು ಶಾಲಾ ಆಡಳಿತ ತಿಳಿಸಿದೆ.
 ಕನಿಷ್ಠ ಇಬ್ಬರು ವಿದ್ಯಾರ್ಥಿಗಳಲ್ಲಿ ಎಚ್‌1ಎನ್‌1 (H1N1) ಸೋಂಕು ದೃಢಪಟ್ಟಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಸೋಂಕಿಗೆ ಒಳಗಾದ ಓರ್ವ ಸಿಬ್ಬಂದಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶಾಲಾ ಆಡಳಿತ ಮಾಹಿತಿ ನೀಡಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ ಶಾಲೆಗೆ ಆಗಸ್ಟ್ 18ರವರೆಗೆ ರಜೆ ಘೋಷಿಸಲಾಗಿದೆ.
ಶಾಲೆಯಲ್ಲಿ ಒಟ್ಟು 2,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ ಬರೋಬ್ಬರಿ 500 ವಿದ್ಯಾರ್ಥಿಗಳಲ್ಲಿ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದೆ. 137 ಮಕ್ಕಳಿಗೆ ತೀವ್ರ ಜ್ವರ ಬಂದಿದ್ದರಿಂದ ಶಾಲೆಯಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ತಕ್ಷಣವೇ ಮನೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಶಾಲೆಯ 21 ಸಿಬ್ಬಂದಿಯಲ್ಲೂ ಇದೇ ರೀತಿಯ ರೋಗಲಕ್ಷಣಗಳು ಕಂಡು ಬಂದಿದೆ.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇಡೀ ಶಾಲಾ ಆವರಣವನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದೆ. ಜ್ವರ, ಶೀತ, ಕೆಮ್ಮು ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಶಾಲೆಯಲ್ಲಿ ಭೌತಿಕ ತರಗತಿಗಳನ್ನ ನಡೆಸುವುದು ಸುರಕ್ಷಿತವಲ್ಲ ಎಂದು ತೀರ್ಮಾನಿಸಲಾಗಿದೆ. ಹೀಗಾಗಿ ಆಗಸ್ಟ್ 18ರವರೆಗೆ ಮಾಂಟೆಸ್ಸರಿ ಹಾಗೂ ಪ್ರಾಥಮಿಕ ಶಾಲಾ ತರಗತಿಗಳನ್ನ ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ.
 ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶಾಲೆಯ ಸುತ್ತಮುತ್ತಲಿನ ಸ್ವಚ್ಛತೆ ಮತ್ತು ಸುರಕ್ಷತೆಯ ಬಗ್ಗೆಯೂ ಶಾಲಾ ಆಡಳಿತ ಆತಂಕ ವ್ಯಕ್ತಪಡಿಸಿದೆ. ಶಾಲೆಯ ಆವರಣದ ಹೊರಭಾಗದಲ್ಲಿ ಹಲವು ಬೀದಿಬದಿಯ ತಿಂಡಿ ತಿನಿಸು ಮಾರಾಟಗಾರರು ಹಾಗೂ ಇತರ ವ್ಯಾಪಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಅಸ್ವಚ್ಛ ಪರಿಸ್ಥಿತಿ ಮತ್ತು ತ್ಯಾಜ್ಯ ಸಂಗ್ರಹದಿಂದ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆಗೆ ಹೆಚ್ಚುವರಿ ಅಪಾಯ ಎದುರಾಗಬಹುದು ಎಂದು ಶಾಲೆ ಕಳವಳ ವ್ಯಕ್ತಪಡಿಸಿದೆ.
ಸುತ್ತಮುತ್ತ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂದು ಶಾಲೆ ದೂರಿದೆ. ಇದಲ್ಲದೆ, ಪಾಟರಿ ರಸ್ತೆ–ಜಾನ್ ಆರ್ಮ್‌ಸ್ಟ್ರಾಂಗ್ ರಸ್ತೆ ಜಂಕ್ಷನ್ ಬಳಿ ಕಾರ್ಯನಿರ್ವಹಿಸುತ್ತಿರುವ ಕಬಾಬ್ ಮಾರಾಟಗಾರರಿಂದ ನಿರಂತರವಾಗಿ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಸ್ವಚ್ಛತೆ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುತ್ತಿವೆ ಎಂದು ಶಾಲಾ ಆಡಳಿತ ತಿಳಿಸಿದೆ.
ತಕ್ಷಣ ಆರೋಗ್ಯ ತಪಾಸಣೆಗೆ ಮನವಿ
ಶಾಲೆಯ ಸುತ್ತಮುತ್ತ ಕಾರ್ಯನಿರ್ವಹಿಸುತ್ತಿರುವ ಆಹಾರ ಮಾರಾಟಗಾರರ ತಕ್ಷಣದ ಆರೋಗ್ಯ ಮತ್ತು ಸುರಕ್ಷತಾ ತಪಾಸಣೆ ನಡೆಸುವಂತೆ ಶಾಲಾ ಆಡಳಿತ ನಾಗರಿಕ ಅಧಿಕಾರಿಗಳನ್ನು ಒತ್ತಾಯಿಸಿದೆ. ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆಯೂ ಮನವಿ ಮಾಡಿದೆ. ಈ ಸಂಬಂಧ ಶಾಲೆಯು ಈಗಾಗಲೇ ಶಿಕ್ಷಣಾಧಿಕಾರಿ ಹಾಗೂ ನಗರ ಪಾಲಿಕೆಯ ಆರೋಗ್ಯಾಧಿಕಾರಿಯನ್ನು ಸಂಪರ್ಕಿಸಿದ್ದು, ತುರ್ತು ಕ್ರಮಕ್ಕೆ ಕೋರಿದೆ.
ಶಾಲೆಯಲ್ಲಿನ ನೂರಾರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಜ್ವರದಂತಹ ಲಕ್ಷಣಗಳಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯ ತಪಾಸಣೆ, ಸ್ವಚ್ಛತಾ ಕ್ರಮಗಳು ಮತ್ತು ಶಾಲೆಯ ಸುತ್ತಮುತ್ತಲಿನ ಆಹಾರ ಮಾರಾಟ ಕೇಂದ್ರಗಳ ಪರಿಶೀಲನೆ ಈಗ ತುರ್ತು ಅಗತ್ಯವಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ